Header Ads
Header Ads
Breaking News

ಅಂಗನವಾಡಿಗಳನ್ನು ಬಲಿಷ್ಠಗೊಳಿಸಲು ಸ್ವರೂಪ ಬದಲಿಸುವ ಯೋಜನೆ.ಅಂಗನವಾಡಿಗಳನ್ನು ಬಲಿಷ್ಠಗೊಳಿಸಲು ಸ್ವರೂಪ ಬದಲಿಸುವ ಯೋಜನೆ.

ಅಂಗನವಾಡಿಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಅಂಗನವಾಡಿಗಳ ಸ್ವರೂಪ ಬದಲಾಯಿಸುವ ಮಹತ್ವಾಂಕಾಕ್ಷಿ ಯೋಜನೆಯನ್ನು ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಾ. ಜಯಮಾಲ ಅಭಿಪ್ರಾಯಪಟ್ಟರು.ಅವರು ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಹೂ ಹಾಕುವ ಕಲ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸಭಾಭವನದಲಿಇದೇ ವೇಳೆ ಮಾತನಾಡಿದ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು. ಟಿ. ಖಾದರ್ ಅವರು, ಮಳೆಗಾಲದಲ್ಲಿ ಆಟಿ ತಿಂಗಳಲ್ಲಿ ಅನ್ನ, ಆಹಾರ, ತಿಂಡಿ, ತಿನಿಸು ಹೇಗಿತ್ತು ಮತ್ತು ಹಿಂದಿನ ಸಂಸ್ಕಾರ – ಸಂಸ್ಕೃತಿ ತಿಳಿಯಲು ಇಂತಹ ಕಾರ್ಯಕ್ರಮಗಳು ಪೂರಕವಾಗಿದೆ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳೆಪುಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ವಹಿಸಿದ್ದರು. ಶಾಲಾಭಿವೃದ್ದಿ ಸಮಿತಿ ವತಿಯಿಂದ ಸಚಿವೆ ಡಾ. ಜಯಮಾಲ ಅವರನ್ನು ಸನ್ಮಾನಿಸಲಾಯಿತು.ಇನ್ನು ಈ ಸಂದರ್ಭ ಮಾಜಿ ಸಚಿವ ಬಿ. ರಮನಾಥ ರೈ, ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಪಿ. ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಹೈದರ್ ಕೈರಂಗಳ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೊಂಟುಗೋಳಿ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply