Header Ads
Header Ads
Breaking News

ಅಂತರ ಜಿಲ್ಲಾ ಮಟ್ಟದ ಪ್ರೊ ಕಬಡ್ಡಿ ಪಂದ್ಯಾಟ ಕಟೀಲು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸ್ಪರ್ಧೆ

ಕಬ್ಬಡಿ ಗ್ರಾಮೀಣ ಬಾಗದ ಕ್ರೀಡೆಯಾಗಿದ್ದು ಇಂದು ಬಹಳ ಪ್ರಸಿದ್ದಿಯನ್ನು ಪಡೇದಿದೆ ಎಂದು ಬಾರತೀಯ ಕಬಡ್ಡಿ ತಂಡದ ಮಾಜಿ ಕಪ್ತಾನ ಜಯ ಎ. ಶೆಟ್ಟಿ ಹೇಳಿದರು.

ಅವರು ಕಟೀಲು ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಟೀಲು ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ ಕೊಂಡೆಮೂಲ ಕಟೀಲು ಇವರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಹಾಗೂ ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇವರ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪ್ರೋ- ಕಬಡ್ಡಿ ಪಂದ್ಯಾಟ ಕಟೀಲ್ ಟ್ರೋಪಿ 2018 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕಟೀಲು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸನತ್‌ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು ಅಧ್ಯಕ್ಷತೆ ವಹಿಸಿದ್ದರು. ಮೊಕ್ತೇಸರ ವಾಸುದೇವ ಆಸ್ರಣ್ಣ ಆಶೀರ್ವಾಚನ ನೀಡಿದರು,

ಈ ಸಂದರ್ಭ ಶಾಸಕ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷಕುಮಾರ್ ಹೆಗ್ಡೆ , ಬೆಳ್ಮಣ್ಣು ಬಂಟರ ಸಂಘದ ಅಧ್ಯಕ್ಷ ಸುಹಾಸ್ ಹೆಗ್ಡೆ , ಬಿಜೆಪಿಯ ಕಟೀಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಿರಣ್ ಶೆಟ್ಟಿ ಕೊಡೆತ್ತೂರು, ಸಾಯಿನಾಥ ಶೆಟ್ಟಿ, ಕ್ಲಬ್‌ನ ಕೇಶವ ಕಟೀಲು, ರಾಜೇಂದ್ರ ಪ್ರಸಾದ್ ಎಕ್ಕಾರು ಮತ್ತಿತರರು ಉಪಸ್ಥಿತರಿದ್ದರು.

Related posts