Header Ads
Header Ads
Header Ads
Breaking News

ಅಕ್ಟೋಬರ್ 7 ರಂದು ಸುಳ್ಯದಲ್ಲಿ ಕಾಂಗ್ರೆಸ್ ಪರಿವರ್ತನ ಸಮಾವೇಶ

ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಅ.7 ರಂದು ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಪರಿವರ್ತನಾ ಸಮಾವೇಶ ನಡೆಯಲಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಬದಲಾವಣೆ ನಿರೀಕ್ಷಿಸುತ್ತಿದ್ದು, ಪರಿವರ್ತನೆಗೆ ಕಾರಣವಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಚುನಾಯಿಸಿ, ಕಳುಹಿಸುವ ಹಿನ್ನಲೆಯಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ ಮಾಡಲು ಈ ಸಮಾವೇಶ ನಡೆಯಲಿದ್ದು, ಸುಮಾರು 500  ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಅಂದು ಪೂರ್ವಾಹ್ನ 10 ಗಂಟೆಗೆ ಸುಳ್ಯ ಪುರಭವನದಲ್ಲಿ ಹಕ್ಕು ಪತ್ರ ಹಾಗೂ ವಿವಿಧ ಇಲಾಖೆಗಳ ಸವಾಲತ್ತು ವಿತರಣೆ ನಡೆಯಲಿದ್ದು, ಆ ಬಳಿಕ ಪರಿವರ್ತನಾ ಸಮಾವೇಶ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕ್ಷೇತ್ರ ಉಸ್ತುವಾರಿ ಶ್ರೀಮತಿ ಸವಿತಾ ರಮೇಶ್, ಕೆ.ಪಿ.ಸಿ.ಸಿ. ಕಾರ್ಯದರ್ಶಿ ಶ್ರೀಮತಿ ವಹಿದಾ ಇಸ್ಮಾಯಿಲ್, ಮಾಜಿ ಜಿ.ಪಂ. ಸದಸ್ಯ ಧನಂಜಯ ಅಡ್ಪಂಗಾಯ, ಕೆ.ಪಿ.ಸಿ.ಸಿ. ಸದಸ್ಯರಾದ ಡಾ. ರಘು, ಎಂ. ವೆಂಕಪ್ಪ ಗೌಡ, ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಎಸ್ ಸಂಶುದ್ಧೀನ್, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ಶ್ರೀಮತಿ ದಿವ್ಯಪ್ರಭಾ ಚಿಲ್ತಡ್ಕ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಶೇಖರ್ ಕುಕ್ಕೆಟಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎನ್.ಎಸ್ ಕರೀಂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಜಯಪ್ರಕಾಶ್ ರೈ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ಮುಖಂಡರಾದ ನಂದರಾಜ್ ಸಂಕೇಶ, ಜೂಲಿಯಾನ ಕ್ರಾಸ್ತಾ, ಕೃಷ್ಣಪ್ಪ ನೆಕ್ರೆಪ್ಪಾಡಿ, ಚಂದ್ರಲಿಂಗಂ ಅಚ್ಚುತ್ತ ಮೆಲ್ಕಾಜೆ, ಶ್ರೀಹರಿ ಕುಕ್ಕುಡೇಲು, ಧರ್ಮಪಾಲ ಕೊಯಿಂಗಾಜೆ, ಸತ್ಯಕುಮಾರ್ ಆಡಿಂಜ, ಶಾಫಿ ಕುತ್ತಮೊಟ್ಟೆ, ಮುತ್ತಪ್ಪ ಪೂಜಾರಿ, ಉದಯಕುಮಾರ್ ಕುಕ್ಕುಡೆಲು, ಶಶಿಕಲಾ ನೀರಬಿದಿರೆ, ಆನಂದ ಕೆಂಬಾರೆ, ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply