Header Ads
Breaking News

ಅಕ್ರಮ ಮರಳುಗಾರಿಕೆ, ಕೆಂಪು ಕಲ್ಲಿನ ಕೋರೆಗೆ ದಾಳಿ ; ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ

ಮೂಡುಬಿದಿರೆ: ಇರುವೈಲು ಪ್ರದೇಶದಲ್ಲಿ ಅಕ್ರಮ ಮರಗಳುಗಾರಿಕೆ ನಡೆಯುತ್ತಿದೆ. ಕೆಲವೊಂದು ಪಂಚಾಯತ್ ವ್ಯಾಪ್ತಿಯಲ್ಲಿ ಕೆಂಪು ಕಲ್ಲಿನ ಅನಧಿಕೃತ ಕೋರೆಗಳು ಕಾರ್ಯಾಚರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಖುದ್ದು ದಾಳಿ ನಡೆಸಿ ಅಕ್ರಮ ಕೋರೆ ನಡೆಸುವವರು ಮಾತ್ರವಲ್ಲ ಸ್ಥಿತಿ ಮುುಂದುವರೆದರೆ ಖುದ್ದು ದಾಳಿ ನಡೆಸಬೇಕಾಗುತ್ತದೆ. ದಾಳಿಯ ಸಂದರ್ಭದಲ್ಲಿ ಸಂಬಂಧಪಟ್ಟ ಪಂಚಾಯತ್ ವ್ಯಾಪ್ತಿಯ ಪಿಡಿಒ ಹಾಗೂ ಗ್ರಾಮಕರಣೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅವರು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಅಗತ್ಯವಿರುವ ಗ್ರಾಮಪಂಚಾಯತ್ ಕಚೇರಿ, ಪಂಚಾಯತ್ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೂಕ್ತವಾದ ಜಾಗವನ್ನು ಪಿಡಿಓ ಹಾಗೂ ಗ್ರಾಮ ಕರಣೀಕರು ಪರಸ್ಪರ ಸಮನ್ವಯದೊಂದಿಗೆ ವಾರದೊಳಗೆ ಗುರುತಿಸಿ ವರದಿ ನೀಡಬೇಕು. ರಕ್ಷಿತಾರಣ್ಯದ ಸಮಸ್ಯೆಗಳಿದ್ದಲ್ಲಿ ಅರಣ್ಯ ಇಲಾಖೆಯವರು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ ತೊಡಕುಗಳನ್ನು ನಿವಾರಿಸಿಕೊಡುವಂತೆ ಸೂಚಿಸಿದರು. ಮೂಡುಬಿದಿರೆಯ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಅವರು ಮಾತನಾಡಿ ಅಕ್ರಮ ಕಸಾಯಿಖಾನೆ, ಡ್ರಗ್ಸ್, ರಸ್ತೆ ಅಪಘಾತಗಳ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಿದರು. ಅಕ್ರಮ ಗೋಸಾಗಾಟ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳುವ ಗೋವುಗಳ ಆರೈಕೆಗೆ ಸೂಕ್ತ ವ್ಯವಸ್ಥೆಯ ಕೊರತೆಯಿದ್ದು ಸರಕಾರದ ವತಿಯಿಂದ ಗೋಶಾಲೆ ತೆರೆಯಲು ವಿನಂತಿಸಿದರು.

ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ತಾಲೂಕು ಪಂಚಾಯತ್ ಅಧ್ಯಕ್ಷೆ ರೇಖಾ ಸಾಲ್ಯಾನ್, ಜಿಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಕ್ರೈಸ್ತ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜಾಯ್ಲಸ್ ಡಿ ಕೋಸ್ತ, ಎಪಿಎಂ.ಸಿ ಅಧ್ಯಕ್ಷ ಕೆ.ಕೃಷ್ಣರಾಜ್ ಹೆಗ್ಡೆ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ,ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *