Header Ads
Header Ads
Header Ads
Breaking News

ಅಖಿಲ ಭಾರತ ಕಾರ್ಮಿಕರ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ : ಹಳೆ ಬಂದರಲ್ಲಿ ಬೀದಿಗಿಳಿದ ಬಂದರಿನ ಹಮಾಲಿ ಕಾರ್ಮಿಕರು

ಮಂಗಳೂರು: ನರೇಂದ್ರ ಮೋದಿ ಸರಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕಾರ್ಮಿಕರ ಕಾನೂನು ಮತ್ತು ಹಕ್ಕುಗಳ ರಕ್ಷಣೆಗಾಗಿ ನಾಳೆ ಜನವರಿ 8ರಂದು ದೇಶವ್ಯಾಪಿ ನಡೆಯುವ ಕಾರ್ಮಿಕರ ಮುಷ್ಕರ ಬೆಂಬಲಿಸಿ ಬಂದರು ಶ್ರಮಿಕರ ಸಂಘ ನೇತೃತ್ವದಲ್ಲಿ ಇಂದು ಹಳೆ ಬಂದರು ಕಾರ್ಮಿಕರ ಕಟ್ಟೆ ಬಳಿ ಸಭೆ ನಡೆಸಿದರು.

ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಇಂದು ಬೆಳಿಗ್ಗೆ ವಾಣಿಜ್ಯ ವಹಿವಾಟು ಆರಂಭಗೊಳ್ಳುತ್ತಿದ್ದಂತೆ ಹಳೆ ಬಂದರು ಕಾರ್ಮಿಕರ ಕಟ್ಟೆ ಬಳಿ ಸಮಾವೇಶಗೊಂಡ ಹಮಾಲಿ ಕಾರ್ಮಿಕರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಬಂದರು ಶ್ರಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಅವರು ನರೇಂದ್ರ ಮೋದಿ ಸರಕಾರದ ತಪ್ಪು ಆರ್ಥಿಕ ನೀತಿಯಿಂದಾಗಿ ಜಿಡಿಪಿ ಪಾತಾಳಕ್ಕೆ ಕುಸಿದಿದೆ ಉತ್ಪಾದನಾ ಮತ್ತು ನಿರ್ಮಾಣ ಕ್ಷೇತ್ರಗಳು ಜೀವನ್ಮರಣ ಸ್ಥಿತಿಯಲ್ಲಿದೆ ಇದರಿಂದಾಗಿ ಇತಿಹಾಸದಲ್ಲೇ ಕಂಡರಿಯದ ನಿರುದ್ಯೋಗ ಸಮಸ್ಯೆ ಉಂಟಾಗಿದೆ. ಬೆಲೆ ಏರಿಕೆಯನ್ನು ನಿಯಂತ್ರಿಸಲಾಗುತ್ತಿಲ್ಲ ಎಂದರು.

ಈ ಸಂದರ್ಭ ಬಂದರು ಶ್ರಮಿಕರ ಸಂಘದ ಉಪಾಧ್ಯಕ್ಷ ಹಸನ್ ಮೋನು, ಖಜಾಂಚಿ ಹರೀಶ್ ಕೆರೆಬೈಲ್ ಮುಖಂಡರಾದ ಮೊಯಿದಿನ್ ಕಲ್ಕಟ್ಟ, ಮಾಧವ ಕಾವೂರು,ಚಂದ್ರಹಾಸ ಕುತ್ತಾರ್, ಮಜೀದ್ ಉಳ್ಳಾಲ, ಫಾರೂಕ್ ಉಳ್ಳಾಲ, ಯಲ್ಲಪ್ಪ ಹಂಝ ಜಪ್ಪಿನಮೊಗರು ಮುಂತಾದವರು ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *