Header Ads
Header Ads
Breaking News

ಅಜಿಲಮೊಗರುವಿನಲ್ಲಿ ಅಕ್ರಮ ಮರಳುಗಾರಿಕೆ: ಸುಮಾರು 12 ಲಕ್ಷ ಬೆಲೆಬಾಳುವ ಸೊತ್ತುಗಳ ವಶಕ್ಕೆ

ಬಂಟ್ವಾಳ : ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ನಾಡದೋಣಿಗಳ ಸಹಾಯದಿಂದ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದದ್ದನ್ನು ಪತ್ತೆಹಚ್ಚಿದ ಬಂಟ್ವಾಳ ಎಎಸ್ಪಿ ಸೊನಾವಣೆ ಋಷಿಕೇಷ್ ಭಗವಾನ್ ನೇತೃತ್ವದ ಪೊಲೀಸರ ತಂಡ ಅಂದಾಜು 12ಲಕ್ಷ ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಎಸ್ಪಿ, ಗ್ರಾಮಾಂತರ ಠಾಣಾಧಿಕಾರಿ ಯವರ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ 2ನಾಡ ದೊಣಿಗಳ ಸಹಾಯದಿಂದ ಮರಳು ಗಾರಿಕೆ ನಡೆಸಿ ದಡದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಲಾರಿಗೆ ಮರಳನ್ನು ಲೋಡು ಮಾಡುತ್ತಿದ್ದು, ಪೊಲೀಸ್ ವಾಹನವನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಟಿಪ್ಪರ್ ಲಾರಿ, 2 ಕಬ್ಬಿಣದ ದೋಣಿಗಳು ದೋಣಿ ಚಲಾಯಿಸಲು ಬಳಸುವ 2ಪೆಟ್ರೊಲ್ ಇಂಜಿನ್ ಹಾಗೂ ಪ್ರತಿ ದೊಣಿಯಲ್ಲಿ ಸುಮಾರು2 ಟಿಪ್ಪರ್ ಲೋಡಿನಷ್ಟು ಮರಳು ತುಂಬಿದ್ದು ಕಂಡು ಬಂದಿದೆ.ಕಾರ್ಯಾಚರಣೆಯಲ್ಲಿ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸೋನವಣೆ ಋಷಿಕೇಶ್ ಭಗವಾನ್, ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ.ನಾಗರಾಜ್, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕ ಪ್ರಸನ್ನ ಎಮ್ .ಎಸ್ ಹಾಗೂ ಸಿಬ್ಬಂದಿಗಳಾದ ಸುಂದರ, ಮಾಧವ, ಬಸವರಾಜ್, ಕಿರಣ್, ಸತ್ಯ ಪ್ರಕಾಶ್ ಮೊದಲಾದವರು ಪಾಲ್ಗೊಂಡಿದ್ದರು.

Related posts

Leave a Reply