Header Ads
Header Ads
Breaking News

ಅಜ್ಜಿಬೆಟ್ಟು ಪ್ರಾಥಮಿಕ ಶಾಲೆಯ ಆರಂಭೋತ್ಸವ

ಬಂಟ್ವಾಳದ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್‌ಕೆಜಿ, ಯುಕೆಜಿ ಚಿಣ್ಣರ ಮನೆಯ ನೂತನ ಸಾಲಿನ ಆರಂಭೋತ್ಸವ, ಒಂದರಿಂದ ಏಳನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳ ವಿತರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಗುರುವಾರ ಶಾಲೆಯಲ್ಲಿ ನಡೆಯಿತು.ನೂತನ ವಿದ್ಯಾರ್ಥಿಗಳಿಗೆ ಗಣ್ಯರು ಗುಲಾಬಿ ಹೂ ನೀಡುವ ಮೂಲಕ ಶಾಲೆಗೆ ಬರಮಾಡಿಕೊಂಡರು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶಿವಪ್ರಕಾಶ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಸಿದರು. ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.

 ರೋಟರಿ ನಿಯೋಜಿತ ಅಧ್ಯಕ್ಷ ಮಂಜುನಾಥ ಆಚಾರ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮಾಡಿದರು. ಈ ಸಂದರ್ಭ ಅವರು ಮಾತನಾಡಿ ರೋಟರಿ ಸಂಸ್ಥೆ ಆರಮಭದಿಂದಲೂ ಬಿ.ಮೂಡ ಶಾಲೆಗೆ ಸಹಕಾರವನ್ನು ನೀಡಿಕೊಂಡು ಬಂದಿದೆ. ಅದನ್ನು ಮುಂದಿನ ದಿನಗಳಲ್ಲೂ ನಾವು ಮುಂದುವರೆಸಿ ಕೊಂಡು ಹೋಗಲು ಬದ್ದರಿದ್ದೇವೆ ಎಂದರು. ಶಾಲೆಯ ಹಳೆಯ ವಿದ್ಯಾರ್ಥಿಗಳು ಜೊತೆ ಸೇರಿಕೊಂಡು ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮಾಡುವುದು ಅಭಿನಂದನೀಯ ಎಂದರು. ಬಂಟ್ವಾಳ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರಾ, ತಾ.ಪಂ.ಸದಸ್ಯ ಅಬ್ಬಾಸ್ ಅಲಿ, ಸ್ವಣೋದ್ಯೋಮಿ ಸುನಿಲ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್, ಶಾಲಾಭಿವೃದ್ದಿ ಸಮಿತಿ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಲಾಲ್, ಹಳೆ ವಿದ್ಯಾರ್ಥಿ ಜಯಂತ ಅಗ್ರಬೈಲು, ಶ್ರೀಧರ ಅಮೀನ್ ಹಾಜರಿದ್ದರು.

Related posts

Leave a Reply