Header Ads
Header Ads
Breaking News

ಅಡಕೆ ಬಗ್ಗೆ ಕೇಂದ್ರ ಸಮರ್ಪಕ ಕ್ರಮ ಕೈಗೊಳ್ಳದಿದ್ದರೆ ರೈತರಿಂದ ದಂಗೆ ಕಾಂಗ್ರೆಸ್ ಕಿಸಾನ್ ಘಟಕ ಅಧ್ಯಕ್ಷ ಉಮಾನಾಥ ಶೆಟ್ಟಿ ಎಚ್ಚರಿಕೆ

ಪುತ್ತೂರು; ಜಿಲ್ಲೆಯ ರೈತರ ಬದುಕಿಗೆ ಊರುಗೋಲಾಗಿರುವ ಅಡಕೆ ಬೆಳೆಯ ’ಅಜೆಂಡಾ’ ದ ಮೂಲಕ ಕಳೆದ ಲೋಕಸಭೆ ಚುನಾವಣೆಯಲ್ಲಿ ಅಧಿಕಾರ ಪಡೆದುಕೊಂಡ ಈ ಭಾಗದ ಬಿಜೆಪಿಗರು ಇದೀಗ ಅಡಕೆ ಬೆಳೆಗಾರರ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರಿಸುತ್ತಿದ್ದಾರೆ. ಕೇಂದ್ರ ಸರಕಾರ ತಕ್ಷಣ ಅಡಕೆ ಬೆಳೆ ಕುರಿತು ಸಮರ್ಪಕ ಕ್ರಮ ಕೈಗೊಳ್ಳದಿದ್ದರೆ ಪಕ್ಷಾತೀತವಾಗಿ ರೈತರು ದಂಗೆ ಏಳುವ ಪರಿಸ್ಥಿತಿ ಅನಿವಾರ್ಯವಾಗಲಿದೆ ಎಂದು ಜಿಲ್ಲಾ ಕಾಂಗ್ರೇಸ್ ಕಿಸಾನ್ ಘಟಕ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ತಿಳಿಸಿದರು.ಅವರು ಶುಕ್ರವಾರ ಪುತ್ತೂರಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,ಲೋಕಸಭೆಯಲ್ಲಿ ಆರೋಗ್ಯ ಸಚಿವ ಅಡಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ ಎಂಬ ವರದಿ ಮಂಡಿಸಿದ ಪರಿಣಾಮ ಮಾರುಕಟ್ಟೆಯಲ್ಲಿ ಅಡಕೆ ಕೇಳುವವರಿಲ್ಲ. ದಿನ ದಿನೇ ಅಡಕೆಯ ಬೆಲೆ ಕಡಿಮೆಯಾಗುತ್ತಿದೆ. ಕಿಲೋ ಅಡಕೆಗೆ ರೂ.251 ಉತ್ಪಾದನಾ ವೆಚ್ಚವಾಗಿದ್ದು, ಇದಕ್ಕಾಗಿ ಬೆಂಬಲ ಬೆಲೆ ಘೋಷಣೆ ಮಾಡುವುದಾಗಿ ತಿಳಿಸಿ ಹೋದ ನಿರ್ಮಲಾ ಸೀತಾರಾಮನ್ ಹೇಳಿಕೆ ಬರೇ ಹೇಳಿಕೆಯಾಗಿಯೇ ಉಳಿದಿದೆ. ಅಡಕೆ ಬೆಳೆಗಾರರ ರಕ್ಷಣೆಗಾಗಿ ಕೇಂದ್ರ ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ರಾಜ್ಯದಾದ್ಯಂತ ಕಾಂಗ್ರೇಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು. ಪುತ್ತೂರು ಬ್ಲಾಕ್ ಕಾಂಗ್ರೇಸ್ ನೇತೃತ್ವದಲ್ಲಿ ಫೆಬ್ರವರಿ 26 ರಂದು ಪ್ರತಿಭಟನೆ ನಡೆಯಲಿದೆ ಎಂದವರು ಹೇಳಿದರು.
ಮಾಧ್ಯಮಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೇಸ್ ಕಾರ್ಯದರ್ಶಿ ಮುರಳೀಧರ್ ಶೆಟ್ಟಿ ಕಲ್ಲಾಜೆ, ಪುತ್ತೂರು ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕೋಡಿಂಬಾಳ, ಪುತ್ತೂರು ಬ್ಲಾಕ್ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ನಿರ್ಮಲ ಕುಮಾರ್ ಜೈನ್ ಉಪಸ್ಥಿತರಿದ್ದರು.
ವರದಿ: ಅನೀಶ್ ಪುತ್ತೂರು

Related posts

Leave a Reply