Header Ads
Header Ads
Breaking News

ಅಡ್ಯಾರ್ ಗಾರ್ಡನ್‌ನಲ್ಲಿ ಕಾಂಗ್ರೆಸ್ ಪರಿವರ್ತನಾ ಯಾತ್ರೆ ಸಮಾವೇಶ

ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪರಿವರ್ತನಾ ಯಾತ್ರೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರದ ಸಿದ್ಧತೆಯನ್ನ ಮಾಡಿಕೊಂಡಿದೆ. ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪರಿವರ್ತನಾ ಯಾತ್ರೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ಘಟಾನುಘಟಿ ನಾಯಕರು ಜಿಲ್ಲೆಗೆ ಆಗಮಿಸಿ, ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ, ಇನ್ನು ಸಮಾವೇಶವನ್ನು ಉದ್ಘಾಟಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಮಾತ್ರವಲ್ಲದೇ ನಳಿನ್ ಕಟೀಲ್ ನಿಷ್ಪಯೋಜಕ ಲೋಕಸಭಾ ಸದಸ್ಯ ಅಂತಾ ಕಿಡಿಕಾರಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪಣತೊಡಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಕಾಂಗ್ರೆಸ್ ಮುಖಂಡರಾದ ಸಿಎಂ.ಇಬ್ರಾಹಿಂ, ಮುಖಂಡರಾದ ವಿಷ್ಣುನಾಥ್ , ಲಕ್ಷ್ಮೀನಾರಾಯಣ, ವಿನಯ್ ಕುಮಾರ್ ಸೊರಕೆ, ರಮಾನಾಥ್ ರೈ ಸೇರಿದಂತೆ ಮತ್ತಿತರರು ಉಪಸ್ಥಿತಿರಿದ್ದರು.

Related posts

Leave a Reply

Your email address will not be published. Required fields are marked *