Header Ads
Breaking News

ಅಧಿಕಾರಿಗಳು ಸಾಮಾಜಿಕ ಅರಣ್ಯದ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕಿದೆ: ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು

 

ವಿಟ್ಲ: ಕರ್ನಾಟಕ ಅರಣ್ಯ ಇಲಾಖೆ, ದ. ಕ. ಜಿಲ್ಲಾ ಪಂಚಾಯಿತಿ, ಸಾಮಾಜಿಕ ಅರಣ್ಯ ವಿಭಾಗ ಮಂಗಳೂರು, ಸಾಮಾಜಿಕ ಅರಣ್ಯ ವಲಯ ಬಂಟ್ವಾಳ ವತಿಯಿಂದ ಅನಂತಾಡಿ ಸಸ್ಯಕ್ಷೇತ್ರದಲ್ಲಿ ನಿರ್ಮಾಣವಾದ ಅನಂತ ಔಷಧಿ ವನ, ವೀರಕಂಬ ಕೆಲಿಂಜದಲ್ಲಿ ನಿರ್ಮಾಣವಾದ ವಲಯ ಅರಣ್ಯಾಧಿಕಾರಿಗಳ ಕಛೇರಿಯ ಲೋಕಾರ್ಪಣೆ ನಡೆಯಿತು.


ಈ ಸಂದರ್ಭ ಮಾತನಾಡಿದ ಬಂಟ್ವಾಳ ವಿಧಾನಸಭಾಕ್ಷೇತ್ರದ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಸಾಮಾಜಿಕ ಅರಣ್ಯದ ಬಗ್ಗೆ ಜನರಿಗೆ ಮನವರಿಕೆ ಮಾಡುವ ಕಾರ್ಯ ನಡೆಯಬೇಕಾಗಿದೆ. ಪ್ರಕೃತಿಗೆ ಹಾಗೂ ಮುಂದಿನ ಜನಾಂಗಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಕೆಲಸವನ್ನು ಮಾಡಬೇಕಾಗಿದೆ. ಮಕ್ಕಳ ಮೂಲಕ ಸಸಿಗಳನ್ನು ಬೆಳೆಸುವ ಕಾರ್ಯವಾದಾಗ ಭವಿಷ್ಯಕ್ಕೆ ಸಂಪತ್ತಾಗುತ್ತದೆ ಎಂದು ಹೇಳಿದರು.


ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನೆಟಾಲ್ಕರ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ. ಎಂ. ಅಬ್ಬಾಸ್ ಅಲಿ, ಸದಸ್ಯೆ ಗೀತಾಚಂದ್ರಶೇಖರ್, ಅನಂತಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸನತ್ ಕುಮಾರ್ ರೈ ಮತ್ತಿತರರು ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *