Header Ads
Header Ads
Breaking News

ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ:ಕುಂದಾಪುರದ ಪತ್ರಕರ್ತನ ಬಂಧನ

ಕುಂದಾಪುರ: ಅಪ್ರಾಪ್ತ ಶಾಲಾ ವಿದ್ಯಾರ್ಥಿಗಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ರಾಜ್ಯಮಟ್ಟದ ಪತ್ರಿಕೆಯೊಂದರ ವರದಿಗಾರನೋರ್ವನನ್ನು ಪೊಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ.

ಕುಂದಾಪುರ ಸಮೀಪದ ಹೆಮ್ಮಾಡಿ ನಿವಾಸಿ ಚಂದ್ರ ಕೆ. ಹೆಮ್ಮಾಡಿ(40) ಬಂಧಿತ ಆರೋಪಿ. ಬಾಲಕನೋರ್ವನ ತಂದೆ ನೀಡಿದ ದೂರಿನಂತೆ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆರಕ್ಕೂ ಅಧಿಕ ಅಪ್ರಾಪ್ತ ವಯಸ್ಸಿನ ಬಾಲಕರ ಮೇಲೆ ದೌರ್ಜನ್ಯ ಎಸಗಿದ್ದ ಎಂದು ಪೊಲೀಸ್ ತನಿಖೆ ವೇಳೆ ಬಹಿರಂಗಗೊಂಡಿದೆ.

ಸಮೀಪದ ಕಾಡಿನಲ್ಲಿ ಪಕ್ಷಿಗಳ ಫೋಟೋ ತೆಗೆಯಬೇಕು. ಒಬ್ಬನಿಗೆ ಹೋಗಲು ಭಯವಾಗುತ್ತೆ ನಿಮ್ಮ ಮಗನನ್ನು ನನ್ನ ಜೊತೆ ಕಳುಹಿಸಿಕೊಡಿ ಎಂದು ಬಾಲಕನ ಮನೆಯಲ್ಲಿ ಆರೋಪಿ ಕೇಳಿಕೊಂಡಿದ್ದು, ಅಂತೆಯೇ ಮನೆಯವರು ಬಾಲಕನ್ನು ಕಳುಹಿಸಿಕೊಟ್ಟಿದ್ದರು. ಈ ವೇಳೆಯಲ್ಲಿ ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಿ ಮರಳಿ ಮನೆಗೆ ಬಿಟ್ಟು ಹೋಗಿದ್ದ ಎಂದು ಬಾಲಕನ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕನ ಚಲನವಲನದಲ್ಲಿ ಬದಲಾವಣೆ ಗಮನಿಸಿದ ಮನೆಯವರು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ದೌರ್ಜನ್ಯಕ್ಕೆ ಒಳಗಾದ ಇನ್ನಷ್ಟು ವಿದ್ಯಾರ್ಥಿಗಳನ್ನು ಗುರುತಿಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಿ ಆಪ್ತ ಸಮಾಲೋಚನೆ ಮಾಡಿ ಆರೋಪಿ ವಿರುದ್ಧ ಇನ್ನಷ್ಟು ದೂರುಗಳನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಇಂದು ರಾತ್ರಿ ಇಲ್ಲವೇ ನಾಳೆ ಬೆಳಗ್ಗೆ ಉಡುಪಿ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply