Header Ads
Header Ads
Breaking News

ಅಭಿವೃದ್ಧಿಯಲ್ಲಿ ಸ್ಥಳೀಯ ಸಂಸದರ ಸಂರ್ಪೂಣ ವಿಫಲ. ಮಂಗಳೂರಿನಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ ವಾಗ್ದಾಳಿ

ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಮತ್ತು ಸಮಗ್ರ ಆಡಳಿತ ನಡೆಸುವಲ್ಲಿ ಕೇಂದ್ರದ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಹಾಗೂ ಸಂಸದರು ಬೇಜವಬ್ಧಾರಿಯಿಂದಿದ್ದಾರೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಹೇಳಿದರು.ಅವರು ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಮೇಲ್ಸೇತುವೆ ಇಷ್ಟು ವಿಳಂಬವಾಗಲು ಸಂಸದರೇ ನೇರ ಕಾರಣ. ರಾಷ್ಟ್ರೀಯ ಹೆದ್ದಾರಿ ಹೊಂಡ ಗುಂಡಿಗಳಿಂದ ಹದಗೆಟ್ಟಿದೆ. ಆದರೆ ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ನಾವು ಪ್ರತಿಭಟನೆಯ ದಾರಿ ಹಿಡಿಯಬೇಕಾದ ಅನಿವಾರ್ಯತೆಯನ್ನು ಮೋದಿ ಸರ್ಕಾರ ನಮಗೆ ತಂದುಕೊಟ್ಟಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಕಳ್ಳಿಗೆ ತಾರಾನಾಥ್ ಶೆಟ್ಟಿ, ಮರಿಯಮ್ಮ ಥೋಮಸ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply