Header Ads
Header Ads
Breaking News

ಅಯೋಧ್ಯೆಯ ಭೂ ವಿವಾದ ತೀರ್ಪು ಹಿನ್ನೆಲೆ ರಾಜ್ಯದಲ್ಲಿ ಸಾಮರಸ್ಯವನ್ನು ಕಾಪಾಡಲು ಪ್ರತಿಯೊಬ್ಬರೂ ಸಹಕರಿಸಬೇಕು : ಬಿ. ಜನಾರ್ದನ ಪೂಜಾರಿ ಹೇಳಿಕೆ

ಅಯೋಧ್ಯೆಯ ಭೂ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ಸುಪ್ರೀಂ ಕೋರ್ಟ್ ತೀರ್ಪು ಹೊರಬೀಳಲಿರುವ ಕಾರಣ ದೇಶ ಹಾಗೂ ರಾಜ್ಯದಲ್ಲಿ ಸಾಮರಸ್ಯವನ್ನು ಕಾಪಾಡಲು ಪ್ರತಿಯೊಬ್ಬರೂ ಸಹಕರಿಸಬೇಕು. ಆ ಮೂಲಕ ರಾಷ್ಟ್ರದ ಸರ್ವೋಚ್ಚ ನ್ಯಾಯಾಲಯಕ್ಕೆ ಹಾಗೂ ನ್ಯಾಯಂಗ ಘನತೆಗೆ ಗೌರವ ಕೊಡುವಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಮಾಜಿ ಕೇಂದ್ರ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ಬಿ. ಜನಾರ್ದನ ಪೂಜಾರಿಯವರು ಹೇಳಿದ್ರು.


ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಪರೇಷನ್ ಕಮಲ ಕುರಿತು ಆಡಿದ ಮಾತುಗಳ ಆಡಿಯೋ ಇದೀಗ ಸುಪ್ರೀಂ ಕೋರ್ಟ್ ಮುಂದಿದ್ದು, ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸುವಾಗ ಸದ್ರಿ ಆಡಿಯೋ ಸಂಭಾಷಣೆಯನ್ನು ಪರಿಗಣಿಸಿರೋದಾಗಿ ಹೇಳಿರೋದು ನಿಜಕ್ಕೂ ಸ್ವಾಗತಾರ್ಹ ಬೆಳವಣಿಗೆ. ಚುನಾವಣೆಯಲ್ಲಿ ಜನಾಭಿಪ್ರಾಯದ ಮೂಲಕ ಸುಮಾರು ಒಂದೂವರೆ ವರ್ಷ ಅಧಿಕಾರ ನಡೆಸಿದ ಸರಕಾರವನ್ನು ಕುಟಿಲ ನೀತಿಯಿಂದ ಅಧಿಕಾರ ಕಳೆದುಕೊಳ್ಳುವಲ್ಲಿ ಸಂಚು ನಡೆಸಿದ ಸಿಎಂ ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ ಅವರು, ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅವರಿಗೆ ಏನಾದರೂ ಕಿಂಚಿತ್ತು ಗೌರವವಿದ್ರೆ ಕೂಡಲೇ ನೈತಿಕ ಹೊಣೆಯನ್ನು ಹೊತ್ತು, ತಮ್ಮ ಸ್ಥಾನಕ್ಕ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ರು.
ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *