Header Ads
Header Ads
Breaking News

‘ಅರಿವು’ ಬಾಯಿ ಕ್ಯಾನ್ಸರ್ ಮಾರ್ಗದರ್ಶಿ ಪುಸ್ತಕ ಬಿಡುಗಡೆ

ವಿಶ್ವ ಕ್ಯಾನ್ಸರ್ ದಿನಾಚರಣೆಯ ಹಿನ್ನೆಲೆಯಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ವತಿಯಿಂದ ಪ್ರಕಾಶಿತ, ಡಾ. ಮುರಳೀ ಮೋಹನ ಚೂಂತಾರು ರಚಿಸಿದ ‘ಅರಿವು’ ಬಾಯಿ ಕ್ಯಾನ್ಸರ್ ಮಾರ್ಗದರ್ಶಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು.
ವಿಶ್ವ ಕ್ಯಾನ್ಸರ್ ದಿನಾಚರಣೆಯ ಹಿನ್ನೆಲೆಯಲ್ಲಿ ಬಾಯಿಯ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ವತಿಯಿಂದ ಪ್ರಕಾಶಿತಗೊಂಡ, ಖ್ಯಾತ ವೈದ್ಯ ಡಾ. ಮುರಳೀಮೋಹನ್ ಚೂಂತಾರು ಅವರು ರಚಿಸಿದ ಅರಿವು ಬಾಯಿ ಕ್ಯಾನ್ಸರ್ ಮಾರ್ಗದರ್ಶಿ ಪುಸ್ತಕವನ್ನು ಮಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ಬಿಡುಗಡೆಗೊಳಿಸಲಾಯಿತು.

ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಕೃತಿಯನ್ನು ಬಿಡುಗಡೆಗೊಳಿಸಿದರು. . ಈ ಸಂದರ್ಭ ಮಾತನಾಡಿದ ಸಚಿವ ರಮಾನಾಥ್ ರೈ, ಲೇಖಕ, ವೈದ್ಯ ಮುರಳಿ ಮೋಹನ್ಗ ಚೂಂತಾತು ಅವರು ತಮ್ಮ ಕೃತಿಗಳ ಮೂಲಕ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಮಾತನಾಡಿದ ಲೇಖಕ ಡಾ. ಮುರಲೀ ಮೋಹನ್ ಚೂಂತಾರು, ಕ್ಯಾನ್ಸರ್ ಬಗೆಗಿನ ತಪ್ಪು ಕಲ್ಪನೆ ಮತ್ತು ಅಪನಂಬಿಕೆಗಳನ್ನು ತಡೆದು, ರೋಗದ ಬಗ್ಗೆ ಜಾಗೃತಿ, ಅರಿವು ಮೂಡಿಸುವ ಉದ್ದೇಶದಿಂದ ಅರಿವು ಪುಸ್ತಕವನ್ನು ರಚಿಸಲಾಗಿದೆ. ಬಾಯಿಯ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದೇ ಅರಿವು ಪುಸ್ತಕದ ಪ್ರಾಥಮಿಕ ಉದ್ದೇಶ ಎಂದು ಹೇಳಿದರು. . ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನ ದ.ಕ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.

Related posts

Leave a Reply