Header Ads
Header Ads
Breaking News

ಅ.27ರಂದು ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ

ಪುತ್ತೂರು: ಏಕಕಾಲಿಕ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಇದರ ಸಾಧಕ-ಬಾಧಕದ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಬೇಕು ಎನ್ನುವ ಮೂಲ ಉದ್ದೇಶದಿಂದ ಅ. 27ರಂದು ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 1 ದಿನದ ರಾಷ್ಟ್ರಮಟ್ಟದ ವಿಚಾರಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಡೈರೆಕ್ಟರ್ ಆಫ್ ಲೀಗಲ್ ಸ್ಟಡೀಸ್‌ನ ಮುಖ್ಯಸ್ಥ ಡಾ. ಬಿ.ಕೆ. ರವೀಂದ್ರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆಯ ಅನುಷ್ಠಾನ ಹಲವಾರು ದೃಷ್ಠಿಯಿಂದ ಅನುಕೂಲಕರವಾದ ಮತ್ತು ಆಶಾದಾಯಕವಾಗಿರುತ್ತದೆ ಎಂದರು. ವಿಚಾರ ಸಂಕಿರಣವನ್ನು ಹೈಕೋರ್ಟ್‌ನ ನ್ಯಾಯಾಧೀಶ ಕೃಷ್ಣ ದೀಕ್ಷಿತ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜನರಲ್ ಆಫ್ ಇಂಡಿಯಾದ ಹೆಚ್ಚುವರಿ ಸಾಲಿಸಿಟರ್ ಕೆ.ಎಂ. ನಟರಾಜ್, ಗೌರವ ಅತಿಥಿಗಳಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಪಾಲ್ಗೊಳ್ಳಲಿದ್ದಾರೆ.

ಅಲ್ಲದೆ ಹಲವಾರು ವಿಶ್ವವಿದ್ಯಾನಿಲಯಗಳ ಪ್ರತಿನಿಧಿಗಳು ಪಾಲ್ಗೊಲ್ಲಲಿದ್ದಾರೆ. ಸಂಜೆ ಸಮಾರೋಪ ಸಮಾರಂಭ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಗಣೇಶ್ ಜೋಷಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಹಿರಿಯ ನ್ಯಾಯವಾದಿ ಎಂ. ರಾಮ್‌ಮೋಹನ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಗಣೇಶ್ ಜೋಷಿ, ಸಂಚಾಲಕ ಹಾಗೂ ನ್ಯಾಯವಾದಿ ವಿಜಯನಾರಾಯಣ ಕೆ.ಎಂ, ಪ್ರಾಂಶುಪಾಲ ರಾಜೇಂದ್ರ ಪ್ರಸಾದ್ ಎ ಉಪಸ್ಥಿತರಿದ್ದರು.

Related posts

Leave a Reply