Header Ads
Header Ads
Breaking News

ಅ.29 ರಂದು ತುಳು ಭಜನೆ ಪಂತೊ-2018

ಪುತ್ತೂರು:  ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯಲ್ಲಿ ನಡೆಯಲಿರುವ ಪುತ್ತೂರು ತಾಲೂಕು ಪ್ರಥಮ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ತುಳು ಸಾಹಿತ್ಯ ಸಮ್ಮೇಳನ ಸಮಿತಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಾಗೂ ಪುತ್ತೂರು ಒಡಿಯೂರು ವಜ್ರಮಾತಾ ಮಹಿಳಾ ಘಟಕದ ಸಹಯೋಗದೊಂದಿಗೆ ಅ. 29ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ತುಳು ಭಜನೆ ಪಂತೊ-2018ನಡೆಯಲಿದೆ ಎಂದು ತುಳು ಸಾಹಿತ್ಯ ಸಮ್ಮೇಳನ ಮಹಿಳಾ ಕೂಟದ ಸಂಚಾಲಕಿ ನಯನಾ ರೈ ಹೇಳಿದರು.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ಭಜನೆ ಪಂತೊ-2018ನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಉದ್ಘಾಟಿಸಲಿದ್ದಾರೆ. ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಸವಣೂರು ಕೆ ಸೀತಾರಾಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಜೊತೆ ಕಾರ್ಯದರ್ಶಿಗಳಾದ ಪ್ರೇಮಲತಾ ರಾವ್, ಹರಿಣಾಕ್ಷಿ ಜೆ ಶೆಟ್ಟಿ, ಮಹಿಳಾ ಕೂಟದ ಸಹಸಂಚಾಲಕಿ ಹರಿಣಿ ಪುತ್ತೂರಾಯ, ಪುತ್ತೂರು ವಜ್ರಮಾತಾ ಮಹಿಳಾ ಘಟಕದ ಕಾರ್ಯದರ್ಶಿ ಶಾರದಾ ಕೇಶವ್ ಉಪಸ್ಥಿತರಿದ್ದರು. ಆಯೋಜನೆ

Related posts

Leave a Reply