Header Ads
Header Ads
Header Ads
Breaking News

ಅ.29; ಸಹಕಾರ ರತ್ನ ರಾಜೇಂದ್ರಕುಮಾರ್ ಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು; ಸಹಕಾರಿ ಕ್ಷೇತ್ರಕ್ಕೊಂದು ಹೊಸ ಆಯಾಮ ನೀಡಿದ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಪ್ರಥಮವಾಗಿ ರಾಷ್ಟ್ರಮಟ್ಟದಲ್ಲಿ ’ಬೆಸ್ಟ್ ಚೆಯರ್‌ಮ್ಯಾನ್’ ಪ್ರಶಸ್ತಿ ಪುರಸ್ಕೃತರಾದ ರಾಜ್ಯ ಸಹಕಾರಿ ಮಾರಾಟ ಮಹಾ ಮಂಡಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಇವರಿಗೆ ಪುತ್ತೂರು ತಾಲೂಕು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ವತಿಯಿಂದ ಅ.29 ರಂದು ಪುತ್ತೂರು ಟೌನ್‌ಬ್ಯಾಂಕ್ ಸಭಾಂಗಣದಲ್ಲಿ ಸಂಜೆ 2.30 ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನನ್ಯ ಅಚ್ಚುತ ಮೂಡೆತ್ತಾಯ ತಿಳಿಸಿದರು.

ಪುತ್ತೂರಿನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ರಾಜೇಂದ್ರಕುಮಾರ್ ಗೆ ತಾಲೂಕಿನ ಸಹಕಾರ ಸಂಘಗಳ ಮತ್ತು ಸಹಕಾರಿಗಳ ಪರವಾಗಿ ಈ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ.ರವಿರಾಜ್ ಹೆಗ್ಡೆ ವಹಿಸಲಿದ್ದಾರೆ. ಸಹಕಾರಿ ಯೂನಿಯನ್ ಅಧ್ಯಕ್ಷ ಶಿವರಾಮ ಕಜೆ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಸ್.ಬಿ.ಜಯರಾಮ ರೈ ಮತ್ತು ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದವರು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಕೆದಂಬಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶಶಿಧರ್ ರಾವ್ ಬೊಳಿಕ್ಕಳ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಸ್.ಬಿ.ಜಯರಾಮ ರೈ, ಶಶಿಕುಮಾರ್ ರೈ ಬಾಲ್ಯೊಟ್ಟು, ಟಿ‌ಎಪಿಸಿ‌ಎಂಎಸ್ ಅಧ್ಯಕ್ಷ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು ಉಪಸ್ಥಿತರಿದ್ದರು.

Related posts

Leave a Reply