Header Ads
Header Ads
Breaking News

ಆಂಗ್ಲ ಭಾಷೆಯಲ್ಲಿ ಪಠ್ಯ ನೀಡಲು ಶಿಕ್ಷಣ ಇಲಾಖೆ ನಕಾರ, ಬಂಟ್ವಾಳದಲ್ಲಿ ದುರ್ಗಾ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಧರಣಿ


ಬಂಟ್ವಾಳದ ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಸೇರಿದಂತೆ ಒಂದನೆ ತರಗತಿಯಿಂದ ಐದನೇ ತರಗತಿವರೆಗೆ ಆಂಗ್ಲ ಭಾಷೆ ಕಲಿಕೆಯನ್ನು ಕಳೆದ ವರ್ಷದಂತೆ ಮುಂದುವರಸಿಕೊಂಡು ಹೋಗಲು ಹೈಕೋರ್ಟ್ ಆದೇಶ ನೀಡಿದರೂ ಒಂದರಿಂದ ಐದನೇ ತರಗತಿವರಗೆ ಆಂಗ್ಲ ಭಾಷೆಯಲ್ಲಿ ಪಠ್ಯ ನೀಡಲು ಶಿಕ್ಷಣ ಇಲಾಖೆ ನಿರಾಕರಿಸಿ ಹೈಕೋರ್ಟ್ ಆದೇಶ ಉಲ್ಲಂಘಿಸಿದೆ.
ಸೋಮವಾರ ಪಠ್ಯ ಪುಸ್ತಕ ತರಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಹೋಗಿದ್ದ ಶಾಲಾ ಮುಖ್ಯೋಪಾಧ್ಯಾಯರಿಗೆ ಪಠ್ಯ ಪುಸ್ತಕ ನೀಡಲು ಇಲಾಖಾಧಿಕಾರಿಗಳು ನಿರಾಕರಿಸಿದ ಹಿನ್ನಲೆಯಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಪೋಷಕರು ವಿದ್ಯಾರ್ಥಿಗಳೊಂದಿಗೆ ದಿಢೀರ್ ಧರಣಿ ಸತ್ಯಾಗ್ರಹ ನಡೆಸಿದರು. ಮಧ್ಯಾಹ್ನ ೧೨ ಗಂಟೆಯ ವೇಳೆಗೆ ಧರಣಿ ಸತ್ಯಾಗ್ರಹ ಆರಂಭಗೊಂಡಿದ್ದು ಸಂಜೆ ೪ ಗಂಟೆಯವರೆಗೂ ಮುಂದುವರೆಯಿತು. ಆಂಗ್ಲ ಮಾಧ್ಯಮದಲ್ಲಿ ಪಠ್ಯ ಪುಸ್ತಕ ನೀಡಿ, ನೀಡುವುದಿಲ್ಲವೆಂದಾದರೆ ಲಿಖಿತವಾಗಿ ಕೊಡಿ ಎನ್ನುವ ಬೇಡಿಕೆಗಳನ್ನು ಪ್ರತಿಭಟನಕಾರರು ಮುಂದಿಟ್ಟಿದ್ದರು. ಈ ನಡುವೆ ಎರಡು ಬಾರಿ ಇಲಾಖಾಧಿಕಾರಿಗಳು ಪ್ರತಿಭಟನಕಾರರ ಮನವೊಲಿಸುವ ಪ್ರಯತ್ನ ನಡೆಸಿದರೂ ಮಾತುಕತೆ ಫಲಪ್ರದವಾಗಲಿಲ್ಲ. ಬೇಡಿಕೆಗೆ ಸ್ಪಂದಿಸದಿದ್ದರೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಕಾರರು ಎಚ್ಚರಿಕೆ ನೀಡಿದ ಹಿನ್ನಲೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣ ಎಸೈ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಪ್ರತಿಭಟನಕಾರರು, ಕ್ಷೇತ್ರ ಶಿಕ್ಷಣಾಧಿಕಾರಿ ಸಹಿತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

Related posts

Leave a Reply