Header Ads
Header Ads
Breaking News

ಆಕಾಶಭವನದ ಬಶೀರ್ ಹತ್ಯೆಗೆ ಖಂಡನೆ ಪುತ್ತೂರಿನಲ್ಲಿ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ನಿಂದ ಪ್ರತಿಭಟನೆ

ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ವತಿಯಿಂದ ಆಕಾಶಭವನ ಬಶೀರ್ ಹತ್ಯೆ ಖಂಡಿಸಿ ಪುತ್ತೂರು ಗಾಂಧಿಕಟ್ಟೆ ಬಳಿ ನಡೆದ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾದಿದ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಷ್ಟ್ರೀಯ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ ದೇಶದ ಸಂವಿಧಾನವನ್ನು ನಾಶಪಡಿಸುವ ಕೆಲಸಕ್ಕೆ ಮುಂದಾಗಿರುವ ಬಿಜೆಪಿ ಸಂಸದರು, ಆರೆಸ್ಸೆಸ್ ಮತ್ತು ಬಜರಂಗದಳ ಹಿಂಸೆಗೆ ಪ್ರಚೋದನೆ ನೀಡುತ್ತಿದೆ, ಇಲ್ಲಿನ ಕೆಲ ಪೊಲೀಸರೂ ಮುಸ್ಲಿಮರ ಬಗ್ಗೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭ ಪ್ರತಿಭಟನೆಯಲ್ಲಿ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಹಾಫಿಲ್ ಯಾಕೂಬ್ ಸ‌ಅದಿ ನಾವೂರು, ಜಿಜೆಡಿ‌ಎಸ್ ರಾಜ್ಯ ಜಂಟಿ ಕಾರ್ಯದರ್ಶಿ ಇಬ್ರಾಹಿಂ ಗೋಳಿಕಟ್ಟೆ, ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ, ಗೌರವಾಧ್ಯಕ್ಷ ಖಾಸಿಂ ಹಾಜಿ ಮಿತ್ತೂರು ಮತ್ತಿತರರು ಹಾಜರಿದ್ದರು.

Related posts