Header Ads
Header Ads
Breaking News

ಆಗಸ್ಟ್ 23ರಂದು ಶ್ರೀ ಕ್ಷೇತ್ರ ಕದ್ರಿಯಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

ಕಲ್ಕೂರ ಪ್ರತಿಷ್ಠಾನದಿಂದ ಪ್ರತೀ ವರುಷ ಹಮ್ಮಿಕೊಂಡು ಬರುತ್ತಿರುವ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ಸ್ಪರ್ಧೆಯು ಆಗಸ್ಟ್ 23ರಂದು ಶ್ರೀಕ್ಷೇತ್ರ ಕದ್ರಿಯಲ್ಲಿ ಜರುಗಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸದರು.ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಆಗಸ್ಟ್ 23ರಂದು ಬೆಳಿಗ್ಗೆ 9.30ಕ್ಕೆ ಕೃಷ್ಣ ವರ್ಣ ವೈಭವ, ಶ್ರೀ ಕೃಷ್ಣ ಗಾನ ವೈಭವ, ಶ್ರೀ ಕೃಷ್ಣ ರಂಗೋಲಿ ನಡೆಯಲಿರುವುದು. ಮಧ್ಯಾಹ್ನ 12.30ಕ್ಕೆ ಕದ್ರಿ ದೇವಳದ ನಂದಗೋಕುಲ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರವ್ಯಾಪಿ ಮಾನ್ಯತೆಗೊಂಡ ಶ್ರೀಕೃಷ್ಣವೇಷ ಸ್ಪರ್ಧೆಯು ಕಂದ ಕೃಷ್ಣ, ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ಕಿಶೋರ ಕೃಷ್ಣ ಹೀಗೆ ಒಟ್ಟು 30 ವಿಭಾಗಗಳಲ್ಲಿ ಕದ್ರಿ ದೇವಳದ ಒಟ್ಟು ಆವರಣದಲ್ಲಿ ಏಕಕಾಲದಲ್ಲಿ ನಡೆಯಲಿದೆ. ಇನ್ನು ಸ್ಪರ್ಧಾ ಸ್ಥಳದಲ್ಲೇ ಹೆಸರು ನೋಂದಾಯಿಸಲು ಅವಕಾಶವಿರುವುದು, ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ ಎಂದು ಮಾಹಿತಿ ನೀಡಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಎಂ.ಬಿ ಪುರಾಣಿಕ್, ಜನಾರ್ದನ ಹಂಡೆ, ವಿಜಯಲಕ್ಷ್ಮೀ, ಸುಧಾಕರ್ ಪೇಜಾವರ, ದಯಾನಂದ ಕಟೀಲು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *