Header Ads
Header Ads
Breaking News

ಆಧಾರ್ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂಕೋರ್ಟ್

ಬಹು ನಿರೀಕ್ಷಿತ ಆಧಾರ್ ಸಿಂಧುತ್ವ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಆಧಾರ್ ಮೇಲಿನ ದಾಳಿ, ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಹೇಳುವ ಮೂಲಕ ಆಧಾರ್ ಸಿಂಧುತ್ವವನ್ನು ಎತ್ತಿ ಹಿಡಿದಿದೆ.ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಇಂದು ಮಹತ್ವದ ತೀರ್ಪು ಇಂದು ಹೊರಬಿದ್ದಿದ್ದು, ಅಂತಿಮ ತೀರ್ಪಿನ ವಿವರವನ್ನು ನ್ಯಾಯಮೂರ್ತಿ ಎ ಕೆ ಸಿಕ್ರಿ ಓದಿದರು.ಆಧಾರ್ ಮೇಲಿನ ದಾಳಿ ಸಂವಿಧಾನಕ್ಕೆ ವಿರುದ್ಧವಾದುದು. ಆಧಾರ್ ದತ್ತಾಂಶಗಳ ಸೋರಿಕೆ ಅಥವಾ ಅವುಗಳನ್ನು ಕದಿಯುವುದು ಸಂವಿಧಾನಕ್ಕೆ ವಿರುದ್ಧವಾದದ್ದು. ಆಧಾರ್ ಮಾಹಿತಿ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಂತೆಯೇ ಸಮಾಜದ ಹಿತದೃಷ್ಟಿಯಿಂದ ಕೆಲವು ನಿರ್ಬಂಧಗಳು ಅಗತ್ಯ ಎಂದಿರುವ ಕೋರ್ಟ್, ಯೋಜನೆಗಳ ಫಲಾನುಭವಿಗಳಿಗೆ ಆಧಾರ್ ನಿಂದ ಉಪಯೋಗವಾಗುತ್ತಿದೆ’ ಎಂದು ಅಭಿಪ್ರಾಯಪಟ್ಟಿದೆ. ಅಂತೆಯೇ ಆಧಾರ್ ಮಾಹಿತಿಯನ್ನು ತಿರುಚಲು ಸಾಧ್ಯವಿಲ್ಲ ಎಂದು ಹೇಳಿರುವ ಕೋರ್ಟ್ ನಕಲಿ ಆಧಾರ್ ಕಾರ್ಡ್ ಸೃಷ್ಟಿಯೂ ಸಾಧ್ಯವಿಲ್ಲ. ನಕಲಿ ಆಧಾರ್ ಕಾರ್ಡ್ ಸೃಷ್ಟಿಸಲು ಸಾಧ್ಯವಿದ್ದರೆ ಅದನ್ನು ತಡೆಗಟ್ಟಲು ಯತ್ನಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚಸದಸ್ಯ ಪೀಠ ಈ ಪ್ರಕರಣದ ವಿಚಾರಣೆಯನ್ನು ಕಳೆದ ಮಾರ್ಚ್ ತಿಂಗಳಿನಿಂದ ಆರಂಭಿಸಿತ್ತು.12 ಅಂಕಿಗಳ ಆಧಾರ್ ಸಂಖ್ಯೆಯನ್ನು ಬಹುಮುಖ್ಯ ದಾಖಲೆಗಳೊಂದಿಗೆ ಜೋಡಿಸುವುದರಿಂದ ಖಾಸಗಿ ಮಾಹಿತಿ ಸೋರಿಕೆಯಾಗುವ ಸಂಭವವಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿತ್ತು. ಖಾಸಗೀತನ ಮೂಲಭೂತ ಹಕ್ಕು ಎಂದು ಈಗಾಗಲೇ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿರುವುದು ಆಧಾರ್ ಕಡ್ಡಾಯ ಕ್ರಮದಿಂದ ಖಾಸಗೀತನಕ್ಕೆ ಧಕ್ಕೆಯಾಗುತ್ತದೆ ಎಂಬ ಆರೋಪಕ್ಕೆ ಪುಷ್ಟಿ ನೀಡಿದಂತಾಗಿತ್ತು.

Related posts

Leave a Reply