Header Ads
Header Ads
Header Ads
Breaking News

ಆರೋಗ್ಯದ ಬಗ್ಗೆ ವಿಶೇಷವಾದ ಕಾಳಜಿ ವಹಿಸಿ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿಕೆ

 

ಜನರು ಆರೋಗ್ಯದ ಬಗ್ಗೆ ವಿಶೇಷವಾದ ಕಾಳಜಿಯನ್ನು ಇರಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ್ಯೆ ಕಸ್ತೂರಿ ಪಂಜ ಹೇಳಿದರು.

ಅವರು ಪ್ರಜ್ಞಾ ಸಲಾಹ ಕೇಂದ್ರ ಕಂಕನಾಡಿ, ಕೆಮ್ರಾಲ್ ಗ್ರಾಮ ಪಂಚಾಯತ್ ಹಾಗೂ ಕೆ.ಎಂ.ಸಿ ಅಸ್ಪತ್ರೆ ಮಂಗಳೂರು ಇವರ ವತಿಯಿಂದ ಕೆಮ್ರಾಲ್ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಟಿಸಿ ಮಾತನಾಡಿದರು, ಸರಕಾರ ಜನರ ಆರೋಗ್ಯದ ದೃಷಿಯಿಂದ ಅನೇಕ ಯೋಜನೆಗಳನ್ನು ಕೈಗೊಂಡಿರುದು ಮಾತ್ರವಲ್ಲದೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಅನೇಕ ಸಂಸ್ಥೆಗಳು ಉಚಿತ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದ್ದು ಅದನ್ನು ಜನರು ಸದುಪಯೋಗಪಡಿಸಿಕೊಳ್ಲಬೇಕು ಎಂದರು.

ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗೇಶ್ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯ ವಿನೋದ್ ಬೊಳ್ಳೂರು, ಪಂಚಾಯತ್ ಉಪಾಧ್ಯಕ್ಷೆ ತುಳಸಿ ಶೆಟ್ಟಿಗಾರ್, ಪಿ.ಡಿ.ಒ ರಮೇಶ್ ರಾಥೋಡ್, ಪ್ರಜ್ಞಾ ಸಲಹಾ ಕೇಂದ್ರದ ಯೋಜನಾ ಸಂಯೋಜಕ ವಿಲಿಯಂ ಸ್ಯಾಮುವೆಲ್, ಮತ್ತಿತರರು ಇದ್ದರು.
ವರದಿ: ನಿಶಾಂತ್ ಮುಲ್ಕಿ

Related posts

Leave a Reply