Header Ads
Header Ads
Breaking News

ಆಲ್ ಇಂಡಿಯಾ ಮೊಗವೀರ ಅಸೋಸಿಯೇಶನ್ ಆರಂಭೋತ್ಸವ

ಆಲ್ ಇಂಡಿಯಾ ಮೊಗವೀರ ಅಸೋಸಿಯೇಶನ್ ಇದರ ಆರಂಭೋತ್ಸವವು ಜುಲೈ 7ರಂದು ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆಲ್ ಇಂಡಿಯಾ ಮೊಗವೀರ ಅಸೋಸಿಯೇಶನ್‌ನ ಪ್ರಧಾನ ಸಂಚಾಲಕ ಹರೀಶ್ ಎನ್ ಪುತ್ರನ್ ತಿಳಿಸಿದರು.ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಸಂಜೆ4 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸಂಸ್ಥೆಯ ಆರಂಭೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಅಧ್ಯಕ್ಷ ಪ್ರಸಾದ್ ಕಾಂಚನ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಮೊಗವೀರ ಮುಂದಾಳು ಪ್ರಮೋದ್ ಮಧ್ವರಾಜ್ ಹಾಗೂ ಸಚಿವ ಯು.ಟಿ. ಖಾದರ್, ಪಶುಸಂಗೋಪನೆ ಸಚಿವ ವೆಂಕಟರಾವ್ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.ಇನ್ನೂ ಕಾರ್ಯಕ್ರಮದಲ್ಲಿ ಸಾಧನಾ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲಕ್ಷ್ಮಣ್ ಕುಂದರ್, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಎನ್.ಕೆ. ತಿಂಗಳಾಯ, ಸಾಮಾಜ ಸೇವೆಯಲ್ಲಿ ವಾಸುದೇವ ಬೋಳೂರು ಸಹಿತ ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಸಂಚಾಲಕರಾದ ಮಾಧವ ಸುವರ್ಣ, ಖಜಾಂಜಿ ಶಾಮರಾಯ ಸುವರ್ಣ, ರತ್ನಾಕರ್ ಪುತ್ರನ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply