Header Ads
Header Ads
Breaking News

“ಆಳ್ವಾಸ್‌”ಗೆ ಸತತ 14ನೇ ಬಾರಿ ಅವಳಿ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆಯೋಜಿಸಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸತತ 14ನೇ ಬಾರಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ ಹಾಗೂ ಅಳ್ವಾಸ್‌ನ ದೈಹಿಕ ಶಿಕ್ಷಣ ಕಾಲೇಜು ಎರಡು ವಿಭಾಗಗಳಲ್ಲೂ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಒಟ್ಟು 16 ವಿಭಾಗಗಳಲ್ಲಿ ನಡೆದಿರುವ ಸ್ಪರ್ಧೆಯಲ್ಲಿ ಪುರುಷರ7 ಹಾಗೂ ಮಹಿಳೆಯರ 5 ವಿಭಾಗಗಳಲ್ಲಿ ಒಟ್ಟು 12 ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Related posts

Leave a Reply