Header Ads
Breaking News

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಎನ್‍ಬಿಎ ಮಾನ್ಯತೆ : ವೃತ್ತೀಪರ ಪರಿಶೀಲನೆಯ ಆಧಾರದ ಮೇಲೆ ಮೌಲ್ಯಮಾಪನ

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಹಾಗೂ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನೀಕೆಷನ್ ಇಂಜಿನಿಯರಿಂಗ್ ವಿಭಾಗಕ್ಕೆ ರಾಷ್ಟ್ರೀಯ ಮಾನ್ಯತಾ ಮಂಡಳಿಯ (ಎನ್‍ಬಿಎ) ಮಾನ್ಯತೆ ಲಭಿಸಿದೆ.

ಶೈಕ್ಷಣಿಕ ಸಂಸ್ಥೆಯು ನಿರ್ದಿಷ್ಟ ಗುಣ ಮಟ್ಟವನ್ನು ಹೊಂದಿದೆಯೇ ಅಥವಾ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುತ್ತದೆಯೇ ಎನ್ನುವುದನ್ನು ವೃತ್ತಿಪರ ಪರಿಶೀಲನೆಯ ಆಧಾರದ ಮೇಲೆ ಮೌಲ್ಯಮಾಪನ ಮಾಡಿ ದೃಢೀಕರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಮಾನ್ಯತೆಯ ಪರಿಣಾಮವಾಗಿ ಸಂಸ್ಥೆಗಳಿಂದ ಗುಣಮಟ್ಟದ ಸುಧಾರಣೆಗಳ ಉಪಕ್ರಮಗಳನ್ನು ಉತ್ತೇಜಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಪದವೀಧದರಿಗೆ ಉದ್ಯೋಗಾವಕಾಶವನ್ನು ಪಡೆಯಲು ಅನುಕೂಲ ಮಾಡಿಕೊಡುತ್ತದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 2008 ರಲ್ಲಿ ಆರಂಭಗೊಂಡ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ದೇಶದಲ್ಲಿನ ಪ್ರಮುಖ ತಾಂತ್ರಿಕ ಸಂಸ್ಥೆಗಳಲ್ಲಿ ಒಂದಾಗಿದೆ. ಪದವೀಧರರ ಹಾಗೂ ಸ್ನಾತಕೋತ್ತರ ಪದವಿಯ ಸಮಗ್ರ ಅಭಿವೃದ್ಧಿಗೆ ನವೀನ ಬೋಧನಾ-ಕಲಿಕಾ ಪ್ರಕ್ರಿಯೆಯ ಮೂಲಕ ಗುಣಮಟ್ಟ ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತಿದೆ. ಪ್ರಸ್ತುತ ಈ ಸಂಸ್ಥೆಯಲ್ಲಿ ದೇಶದ ನಾನಾ ಭಾಗಗಳಲ್ಲಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದ ಪಠ್ಯ- ಪಠ್ಯೇತರ, ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಕರಾವಳಿ ಭಾಗದ ಅತ್ಯುತ್ತಮ ಸಂಸ್ಥೆಯಾಗಿ ಅನೇಕ ಬಾರಿ ಚಾಂಪಿಯನ್ ಪಟ್ಟ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *