
’ಭ್ರಷ್ಟಾಚಾರದ ವಿರುದ್ಧ ಯುವಜನಾಂಗ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಶ್ಚಿಮ ವಲಯದ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಸುಧೀರ್ ಮಹಾದೇವ ಹೆಗ್ಡೆ ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು, ಯಾವುದೇ ಸಮಸ್ಯೆಯ ಕುರಿತು ಸಾರ್ವಜನಿಕರ ದೂರುಗಳಿಲ್ಲದೇ ಯಾವ ಸಂಸ್ಥೆಯಾಗಲೀ, ಕಾಯ್ದೆಯಾಗಲೀ ಎನನ್ನೂ ಮಾಡಲು ಸಾಧ್ಯವಿಲ್ಲ. ಸಮಾಜದಲ್ಲಿ ಸಂಭವಿಸುತಿರುವ ಭ್ರಷ್ಟಾಚಾರವನ್ನು ನೋಡಿ ಕಣ್ಣುಮುಚ್ಚಿ ಕುಳಿತುಕೊಳ್ಳುವುದು ಸಹ ಭ್ರ್ರಷ್ಟಚಾರಕ್ಕೆ ಸಹಕರಿಸಿದಂತೆ ಎಂದು ಹೇಳಿದರು.
ಈ ಸಂದರ್ಭ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಕಲಾ ವಿಭಾಗದ ಡೀನ್ ಸಂಧ್ಯಾ ಕೆ.ಎಸ್, ಉಪನ್ಯಾಸಕ ರಮೇಶ್.ಬಿ, ಎನ್.ಸಿ, ನಾಗರಾಜ್ ಉಪಸ್ಥಿತರಿದ್ದರು.