Header Ads
Header Ads
Header Ads
Breaking News

ಆಸ್ಪತ್ರೆಯ ವೈದ್ಯನಿಂದ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಸಿಬ್ಬಂದಿಗಳಿಂದ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲು ನಡೆದ ಘಟನೆ

ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈಧ್ಯಾಧಿಕಾರಿ ರಾಬರ್ಟ್ ರೆಬೆಲ್ಲೊ ಆಸ್ಪತ್ರೆಯ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಮತ್ತು ಮಹಿಳಾ ಸಿಬ್ಬಂದಿಯನ್ನ ಮಧ್ಯರಾತ್ರಿ ಆಸ್ಪತ್ರೆಗೆ ಕರೆಯಿಸಿ ಅವ್ಯಾಚವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಯ ಸಿಬ್ಬಂದಿಗಳು ಕಪ್ಪು ಪಟ್ಟಿ ಧರಿಸಿ ಕಾರ್‍ಯನಿರ್ವಹಿಸಿ ಮೌನ ಪ್ರತಿಭಟನೆ ನಡೆಸಿದರು.

ಇತ್ತೀಚೆಗೆ ಅವರು ಆಸ್ಪತ್ರೆಯ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಹೆಚ್ಚಿನ ಕೆಲಸದ ಒತ್ತಡ ಹೇರುತ್ತಿದ್ದಾರೆ. ಸುಖಸುಮ್ಮನೇ ರೇಗಾಡುತ್ತಿದ್ದಾರೆ ಎಂದು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ನೇರ ಆರೋಪಿಸುತ್ತಾರೆ. ಈ ವೈದ್ಯಾಧಿಕಾರಿ ಅಧಿಕಾರ ವಹಿಸಿಕೊಂಡ ನಂತರ ಹೊಸ ಹೊಸ ನಿಯಮಗಳನ್ನು ರೂಪಿಸಿದ್ದು, ನಾವು ಹಿಂದೆ ತಂಡ ಮಾಡಿಕೊಂಡು ಕೆಲಸ ಮಾಡುತ್ತಿದ್ದೇವು. ಈಗ ಅವೈಜ್ಞಾನಿಕವಾದ ನೀತಿಗಳನ್ನು ಅನುಸರಿಸಲು ಹೇಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 29 ನರ್ಸ್‌ಗಳು, 21 ಸ್ಟಾಪ್‌ಗಳು ಒಟ್ಟು 50 ಜನ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಕುಂದಾಪುರ ತಾಲೂಕು ಮಾತ್ರವಲ್ಲದೇ ಜಿಲ್ಲೆಯ ಬೇರೆ ಬೇರೆ ಭಾಗಗಳಿಂದಲೂ ರೋಗಿಗಳು ಇಲ್ಲಿಗೆ ಬರುತ್ತಾರೆ. ಸದಾ ಒಂದಿಲ್ಲೊಂದು ಸುದ್ಧಿಯಲ್ಲಿರುವ ಕುಂದಾಪುರ ಆಸ್ಪತ್ರೆಯಲ್ಲಿ ಮತ್ತೆ ಈಗ ವೈದ್ಯಾಧಿಕಾರಿಯ ವಿರುದ್ಧವೇ ಅಲ್ಲಿನ ಸಿಬ್ಬಂದಿಗಳು ತಿರುಗಿ ಬಿದ್ದಿದ್ದಾರೆ. ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಜಿಲ್ಲಾ ವೈದ್ಯಾಧಿಕಾರಿಗಳೇ ಪರಿಹರಿಸಬೇಕಿದೆ.

Related posts

Leave a Reply