Header Ads
Header Ads
Breaking News

ಇಂದಿರಾ ಕ್ಯಾಂಟೀನ್ ಹೋಬಳಿ ಮಟ್ಟಕ್ಕೆ ವಿಸ್ತರಣೆ :ಯು.ಟಿ. ಖಾದರ್

ಸಿದ್ಧರಾಮಯ್ಯ ಸರಕಾರ ಆರಂಭಿಸಿದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟಕ್ಕೂ ವಿಸ್ತರಿಸುವ ಇರಾದೆ ಇದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಹಾಗೂ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ನೆರವೇರಿಸಿದ ಅವರು ನಗರಸಭೆ ಮತ್ತು ಕೆ.ಯು.ಐ.ಡಿ.ಎಫ್.ಸಿ. ಜಂಟಿ ಸಹಯೋಗದಲ್ಲಿ ಎಡಿಬಿ ಯೋಜನೆಯಡಿ ಪುತ್ತೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಯ ಶಿಲಾನ್ಯಾಸದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ವೇದಿಕೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಪುತ್ತೂರು ಸಹಾಯಕ ಕಮಿಷನರ್ ಎಚ್.ಕೆ. ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕ ಪ್ರಸನ್ನ ಕುಮಾರ್, ಎಡಿಬಿ ಕಾಂಟ್ರಾಕ್ಟರ್ ನಿಕೋಲೊಸ್, ಕೆ.ಯು.ಐ.ಡಿ.ಎಫ್.ಸಿ. ಎಕ್ಸಿಕ್ಯೂಟಿವ್ ಎಂಜಿನಿಯರ್ ಸೂರಜ್, ನಗರಸಭಾ ಸದಸ್ಯರಾದ ರಿಯಾಝ್, ವಿದ್ಯಾಗೌರಿ, ಪದ್ಮನಾಭ, ಶಕ್ತಿ ಸಿನ್ಹಾ, ಫೌಝಿಯಾ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *