Header Ads
Breaking News

ಇಂದು ಸಂಜೆ 7ಗಂಟೆಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ

ನರೇಂದ್ರ ಮೋದಿ ಅವರು ಎರಡನೇ ಬಾರಿ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದು ಇಂದು ಸಂಜೆ 7ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನರೇಂದ್ರ ಮೋದಿ ಹಾಗೂ ಕೇಂದ್ರ ಸಂಪುಟದ ಇತರ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ಜೆಡಿಎಸ್ ನಾಯಕ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ಆಪ್ ವರಿಷ್ಠ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಎಲ್ಲ ಪ್ರತಿಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ಬಾಂಗ್ಲಾದೇಶದ ಅಧ್ಯಕ್ಷ ಮುಹಮ್ಮದ್ ಅಬ್ದುಲ್ ಹಾಮಿದ್, ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಕಿರ್ಗಿಝ್ ರಿಪಬ್ಲಿಕ್‌ನ ಅಧ್ಯಕ್ಷ ಸೂರೋನ್‌ಬೇ ಜೀನ್‌ಬೆಕೋವ್, ಮ್ಯಾನ್ಮಾರ್‌ನ ಅಧ್ಯಕ್ಷ ಯು ವಿನ್ ಮಿಂಟ್, ಮಾರಿಷಶ್ ಪ್ರಧಾನ ಮಂತ್ರಿ ಪ್ರವಿಂದ್ ಕುಮಾರ್ ಜಗ್ನೌತ್, ನೇಪಾಳದ ಪ್ರಧಾನ ಮಂತ್ರಿ ಕೆ.ಪಿ. ಶರ್ಮಾ ಒಲಿ, ಭೂತಾನ್ ಪ್ರಧಾನ ಮಂತ್ರಿ ಡಾ. ಲೊಟೆ ತ್ಸೇರಿಂಗ್, ಥಾಲ್ಯಾಂಡ್‌ನ ವಿಶೇಷ ರಾಜತಾಂತ್ರಿಕ ಗ್ರಿಸಾಡಾ ಬೂನ್‌ರ್ಯಾಕ್ ಹೀಗೆ ಜಗತ್ತಿನ ಪ್ರಮುಖ ವ್ಯಕ್ತಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Related posts

Leave a Reply

Your email address will not be published. Required fields are marked *