Header Ads
Breaking News

ಇಂಧನ ಬೆಲೆ ಏರಿಕೆ ಜನರನ್ನು ಸಂಕಷ್ಟದ ಕೂಪಕ್ಕೆ ತಳ್ಳಿದೆ : ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಪ್ರಸಾದ್

ಕಳೆದ ಕೆಲವು ತಿಂಗಳಿನಿಂದ ನಿರಂತರವಾಗಿ ಜನತೆ ಕೊರೊನಾ ಮಹಾಮಾರಿಯಿಂದ ತತ್ತರಿಸಿ ತನ್ನ ಬದುಕು ಅಸ್ತವ್ಯಸ್ತಗೊಂಡಿರುವಾಗ ಸರಕಾರ ಅವರ ನೋವಿಗೆ ಸ್ಪಂದಿಸಬೇಕಿತ್ತು. ಆದರೆ ಸರಕಾರ ಮಾತ್ರ ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲಿಂಡರ್ ಹೀಗೆ ಬೆಲೆ ಏರಿಕೆ ಮಾಡಿ ಜನರನ್ನು ಮತ್ತಷ್ಟು ಸಂಕಷ್ಟದ ಕೂಪಕ್ಕೆ ತಳ್ಳಿದೆ ಎಂದು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಪ್ರಸಾದ್ ಎನ್ ಕಿಡಿಕಾರಿದ್ದಾರೆ. ಪುತ್ತೂರು ಸಹಿತ ಜಿಲ್ಲೆಯ ಮೂರೂ ಇಂದಿರಾ ಕ್ಯಾಂಟೀನ್ ಸ್ಥಗಿತ ಗೊಂಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಆವರು “ತೈಲ ಬೆಲೆ ಏರಿಸಿ ಜನರನ್ನು ಸಂಕಷ್ಟಕ್ಕೆ ದೂಡಿರುವುದು ಸಾಲದೆಂಬಂತೆ ಸರಕಾರ ಇನ್ನೊಂದು ಹೆಜ್ಜೆ ಮುಂದಕ್ಕಿಟ್ಟು ಬಡವರ, ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿದ್ದ ಇಂದಿರಾ ಕ್ಯಾಂಟಿನ್ ಸಿಬ್ಬಂದಿಗಳಿಗೆ ವೇತನ ನೀಡದೆ ಆ ಸಿಬ್ಬಂದಿಗಳ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದು ವಿಷಾಧಕರ ಎಂದು ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *