Header Ads
Breaking News

ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ : ಶ್ರೀ ಪಿಲಿಚಾಮುಂಡಿ ದೈವದ ನೇಮೋತ್ಸವ

ಸುರತ್ಕಲ್‍ನ ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲೋಶ್ಸವ ನಡೆಯುತ್ತಿದ್ದು, ಶ್ರೀ ಪಿಲಿಚಾಮುಂಡಿ ದೈವದ ಧರ್ಮನೇಮೋತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 31ರಿಂದ ಫೆಬ್ರವರಿ 9ರ ವರೆಗೆ ಬ್ರಹ್ಮಕಲಶೋತ್ಸವ, ನಾಗಮಂಡಲ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕರಾದ ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣ ಅವರ ಘನ ಉಪಸ್ಥಿತಿಯಲ್ಲಿ ಚೇಳ್ಯಾರು ಉಳ್ಳಾಯ ದೈವಸ್ಥಾನದ ಗಡಿಪ್ರಧಾನರು ಆದ ಆದಿತ್ಯ ಮುಕ್ಕಾಲ್ದಿ ಅವರು ಜ್ಯೋತಿ ಪ್ರಜ್ವಲನಗೊಳಿಸಿದರು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ತಾನದ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿದರು.ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ಅವರು ಸಭಾ ಅಧ್ಯಕ್ಷತೆಯನ್ನು ವಹಿಸಿದ್ದರು.ಜಾನಪದ ಚಿಂತಕರಾದ ಡಾ. ವೈ.ಎನ್. ಶೆಟ್ಟಿ ಅವರು ದೈವಾರಾದನೆ ಬಗ್ಗೆ ಧಾರ್ಮಿಕ ಉಪಾನ್ಯಾಸ ನೀಡಿದರು.ಈ ಸಂದರ್ಭ ಜಾನಪದ ವಿದ್ವಾಂಸರಾದ ಗಣೇಶ್ ಆಮಿನ್ ಸಂಕಮಾರ್, ಕರ್ನಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕರಾದ ಮಹಾಬಲೇಶ್ವರ ಎಂ.ಎಸ್. ಮಾಜಿ ಸಚಿವ ಬಿ. ನಾಗರಾಜ್ ಶೆಟ್ಟಿ, ಹಾಗೂ ಬ್ರಹ್ಮಕಲಶ, ನಾಗಮಂಡಲ, ಧರ್ಮನೇಮೋತ್ಸವದ ಅಧ್ಯಕ್ಷರು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.ಸಭಾ ಕಾರ್ಯಕ್ರಮದ ಬಳಿಕ ಶ್ರೀ ಪಿಲಿಚಾಮುಂಡಿ ದೈವಕ್ಕೆ ಧರ್ಮ ನೇಮೋತ್ಸವ ನಡೆಯಿತು.

Related posts

Leave a Reply

Your email address will not be published. Required fields are marked *