Header Ads
Breaking News

ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ : ಧರ್ಮನೇಮೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ

ಸುರತ್ಕಲ್‍ನ ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ, ಬ್ರಹ್ಮಕಲಶಾಭಿಷೇಕ, ಅಷ್ಟಪವಿತ್ರ ನಾಗಮಂಡಲೋತ್ಸ, ಶ್ರೀ ಪಿಲಿಚಾಮುಂಡಿ ದೈವದ ಧರ್ಮನೇಮೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿತು.

ತಡಂಬೈಲ್‍ನ ಶ್ರೀ ದುರ್ಗಾಂಬಾ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಲಕ್ಷ್ಮೀ ನಾರಾಯಣ ಭಟ್ ಅವರು ದೀಪ ಪ್ರಜ್ವಲನಗೊಳಿಸಿದರು. ಬಳಿಕ ಮಾತನಾಡಿದ ಅವರು, ಈ ನಾಡಿನ ಶ್ರೇಯಾಭಿವೃದ್ಧಿಗಾಗಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದೆ. ಈ ಭಾಗದಲ್ಲಿ ಶ್ರೀ ಮಾಹಲಿಂಗೇಶ್ವರ ದೇವರು ಎಲ್ಲರಿಗೂ ಅನುಗ್ರಹ ನೀಡಲಿ ಎಂದು ಹೇಳಿದರು.

ಆನಂತರ ಇದೇ ವೇಳೆ ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ ಯವರು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಈ ಸಂದರ್ಭ ವೇದಮೂರ್ತಿ ವೆಂಕಟ್ರಮಣ ಅಸ್ರಣ್ಣ, ಡಾ. ಎಂ. ಪ್ರಭಾಕರ ಜೋಶಿ ಸೇರಿದಂತೆ ಬ್ರಹ್ಮಕಲಶ ನಾಗಮಂಡಲ, ಧರ್ಮನೇಮೋತ್ಸವ ಸಮಿತಿಯ ಅಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ, ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *