
ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರೆ ಗುರುವಾರ ಆರಂಭವಾಗಿದ್ದು, ಜನವರಿ 24ರ ವರೆಗೆ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ನಡೆಯಲಿದೆ. ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಧ್ವಜಾರೋಹಣ ನೆರವೇರಿತು.
ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ಸಿಕ್ಕಿದೆ. ಜನವರಿ 24ರ ವರೆಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಲಿರುವುದು. ವಾರ್ಷಿಕೋತ್ಸವದ ಪ್ರಯುಕ್ತ ಏಳುಪಟ್ಣ ಮೊಗವೀರ ಸಭಾದವರಿಂದ ಧ್ವಜಾರೋಹಣ ನೆರವೇರಿತು. ಅನೇಕ ಭಕ್ತರು ಧ್ವಜಾರೋಹಣ ಸಂದರ್ಭದಲ್ಲಿ ಪಾಲ್ಗೊಂಡರು.