Header Ads
Breaking News

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ : ದೇವರ ಮಾರು ಗದ್ದೆಯಲ್ಲಿ ಕಂಬಳ ಸಂಭ್ರಮ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರ ಮಾರು ಗದ್ದೆಯಲ್ಲಿ 28ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ ಬಹಳ ಅದ್ಧೂರಿಯಾಗಿ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಜಾನಪದ ಕ್ರೀಡೆಯಾದ ಕಂಬಳಕ್ಕೆ ನೂರಾರು ವರ್ಷ ಇತಿಹಾಸವಿದ್ದು, ಈ ಕೃಷಿ ಸಂಸ್ಕøತಿ ನಿಷೇಧಧಗೊಳಿಸುವ ಹುನ್ನಾರ ನಡೆಯುತ್ತಿದೆ ಎಂಬ ಮಾಹಿತಿ ಈ ಹಿಂದೆ ಕೇಳಿಬಂದಿತ್ತು. ರೈತರ ಹಾಗೂ ಜನರ ಭಾವನಾತ್ಮಕ ಸಂಸ್ಕೃತಿಯಾದ ಕಂಬಳವನ್ನು ನಿಷೇಧ ಅನಗತ್ಯ ವಿಚಾರ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ಸಾಧಕರಾದ ಕಂಬಳ ಕ್ಷೇತ್ರದ ಕೊಳಕ್ಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್, ಉದ್ಯಮ ಕ್ಷೇತ್ರದ ಸತ್ಯಶಂಕರ ಭಟ್ ಮತ್ತು ಸಹಕಾರಿ ಕ್ಷೇತ್ರದ ಬಿ.ಎಸ್. ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

ಇನ್ನು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ವಿಶೇಷ ತಾರಾ ಆಕರ್ಷಣೆಯಾಗಿ ಕಂಡು ಬಂದರು. ಅರವಿಂದ ಬೋಳಾರ್ ಸಭೆಗೆ ಆಗಮಿಸುತ್ತಿದ್ದಂತೆ ಕಂಬಳಾಭಿಮಾನಿಗಳ ಕರತಾಡನ ಮುಗಿಲುಮುಟ್ಟಿತು. ಈ ವೇಳೆ ತೇರಿ ಮೇರಿ ಹಿಂದಿ ಚಲನಚಿತ್ರ ಹಾಡಿ ಅಭಿಮಾನಿಗಳನ್ನು ರಂಜಿಸಿದರು. ಜತೆಗೆ ಚಲನ ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕಂಬಳದ ಆಕರ್ಷಣೆಯನ್ನು ಹೆಚ್ಚಿಸಿದ್ದು ಮಾತ್ರವಲ್ಲದೆ ಐತಿಹಾಸಿಕ ಕಂಬಳ ಆಧಾರಿತ ಚಲನಚಿತ್ರ ನಿರ್ಮಿಸುವ ಬಗ್ಗೆ ಘೋಷಣೆ ಮಾಡಿದರು.
ಈ ವೇಳೆ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು, ಇಂಟೆಕ್ ಕಾರ್ಯದರ್ಶಿ ರಾಕೇಶ್ ಮಲ್ಲಿ, ಮಾಜಿ ಶಾಸಕರಾದ ಶಕುಂತಳಾ ಟಿ ಶೆಟ್ಟಿ, ಮಾಜಿ ಸಚಿವರಾಧ ವಿನಯಕುಮಾರ್ ಸೊರಕೆ, ಅಭಯಚಂದ್ರ ಜೈನ್, ಬಿ. ರಮಾನಾಥ ರೈ, ಯು. ಟಿ. ಖಾದರ್,ಬ್ಯಾಂಕ್‍ಆಫ್ ಬರೋಡ ಮಂಗಳೂರು ವಲಯದ ಜನರಲ್ ಮೆನೇಜರ್ ಗಾಯತ್ರಿ ಆರ್, ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ, ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕೋಟಿ-ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

Related posts

Leave a Reply

Your email address will not be published. Required fields are marked *