
ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಬಿಜೆಪಿ ಸರ್ಕಾರ ಭದ್ರವಾಗಲಿದೆ. ಇನ್ನುಳಿದ ಮೂರುವರೆ ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಮಂಗಳೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮುಂದಿನ ಮೂರುವರೇ ವರ್ಷವೂ ಬಿಜೆಪಿ ಸರ್ಕಾರ ಭದ್ರವಾಗಿರುತ್ತದೆ. ಉಪಚುನಾವಣೆಯಲ್ಲಿ 15 ಸ್ಥಾನಗಳನ್ನು ಗೆಲ್ಲುತ್ತೇವೆ. ಡಿಸೆಂಬರ್ 9ರ ನಂತರ ಕಾಂಗ್ರೆಸ್ನವರು ಬುಗರಿ ಆಡಿಸುತ್ತಾರೆ ನಾವು ಚಕ್ರ ತಿರುಗಿಸುತ್ತೇವೆ. ಸಿದ್ದರಾಮಯ್ಯನವರು ಮುಂದಿನ ಮುಖ್ಯಮಂತ್ರಿ ಎಂದು ಹಗಲು ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ರು.