Header Ads
Breaking News

ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಘೋಷಣೆ : ಎಂ.ಬಿ . ಸದಾಶಿವ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ ಇನ್ನೆರಡು ದಿನದಲ್ಲಿ ಅಭ್ಯರ್ಥಿ ಘೋಷಣೆ ಆಗಲಿದೆ. ಅಕ್ಷಾಂಕ್ಷಿಗಳ ಹೆಸರು ವರಿಷ್ಠರಿಗೆ ಕಳುಹಿಸಲಾಗಿದೆ. ಆಯ್ಕೆಯನ್ನು ಪಕ್ಷದ ವರಿಷ್ಠರು ನಡೆಸಲಿದ್ದಾರೆ ಎಂದು ಮಂಗಳೂರಿನಲ್ಲಿ ಜೆಡಿಎಸ್ ಮುಖಂಡರಾದ ಎಂ.ಬಿ. ಸದಾಶಿವ ವಿಶ್ವಾಸ ವ್ಯಕ್ತಪಡಿಸಿದರು.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿಗೆ ಪ್ರಬಲವಾಗಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಮಾಡುತ್ತಾರೆ. ಮೈತ್ರಿಯಿಂದ ಪಕ್ಷದ ಅಭ್ಯರ್ಥಿಗಳ ಗೆಲುವು ಸಾಧ್ಯ ಇದೆ ಎಂದು ಹೇಳಿದರು.

ಆನಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ಅವರು ಮಾತನಾಡಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುತ್ತೇವೆ. ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡುತ್ತೇವೆ. ಪಕ್ಷದ ವರಿಷ್ಠರ ನಿರ್ದೇಶನದ ಮೇರೆಗೆ ಮತಯಾಚನೆ ಮಾಡುತ್ತೇವೆ ಎಂದ ಅವರು, ಬಿಜೆಪಿಯ ಸಂಸದರು ಯಾವುದೇ ಮಹತ್ತರ ಯೋಜನೆಗಳನ್ನು ತಂದಿಲ್ಲ. ನಳಿನ್ ಅವರ ಕಳಪೆ ಸಾಧನೆಗೆ ಮೈತ್ರಿ ಪಕ್ಷದ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಇದೆ. ಜನಾರ್ದನ ಪೂಜಾರಿ ಅವರು ಪಕ್ಷದ ವಿರುದ್ಧ ಬಹಿರಂಗ ಹೇಳಿಕೆ ನೀಡಿರುವುದು ಸರಿಯಲ್ಲ. ಚುನಾವಣೆಯ ವೇಳೆಯಲ್ಲಿ ಇಂತಹ ಹೇಳಿಕೆ ನೀಡಬಾರದು ಎಂದು ಹೇಳಿದರು.

Related posts

Leave a Reply

Your email address will not be published. Required fields are marked *