Header Ads
Header Ads
Breaking News

ಇರುವೈಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ .ಗ್ರಾಮೀಣ ಪ್ರತಭೆಗಳನ್ನು ಗುರುತಿಸಲು ಸಹಕಾರಿಯಾಗುವ ಕಾರ್ಯಕ್ರಮ

ಮೂಡುಬಿದಿರೆ : ಮಕ್ಕಳಲ್ಲಿ ಸ್ಪರ್ಧಾ ಮನೋಭಾವವನ್ನು ಬೆಳೆಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗುವ ಈ ಕಾರ್ಯಕ್ರಮವು ಮಕ್ಕಳಲ್ಲಿರುವ ಸಭಾ ಕಂಪನವನ್ನು ದೂರಗೊಳಿಸಿ ಮಾತಾನಾಡುವ ಕೌಶಲ ಅಭಿವ್ಯಕ್ತಿಕರಣವನ್ನು ರೂಢಿಸಲು ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಹೇಳಿದರು.ಅವರು ಇರುವೈಲು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರುವೈಲುನಲ್ಲಿ ನಡೆದ ಇರುವೈಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಸಾಧಕರನ್ನು ಮತ್ತು ಸಮಾಜಸೇವಕರನ್ನು ಸನ್ಮಾನಿಸಲಾಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಗ್ರಾ.ಪಂ ಸದಸ್ಯರಾದ ಶಿವಪ್ಪ ಸನಿಲ್, ವಲೇರಿಯನ್ ಕುಟಿನ್ಹ, ದೈ.ಶಿ.ಶಿ.ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಪ್ರವೀಣ್ ಶೆಟ್ಟಿ, ಸುಜಾತ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Related posts

Leave a Reply