Header Ads
Breaking News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸಿಎಂ ಭೇಟಿ

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಡಾ. ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸು ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಸಿ. ಅಮೀನ್ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ಮೂಲಕವಾಗಿ ಮುಖ್ಯಮಂತ್ರಿಗಳನ್ನು ಗೌರವಿಸಲಾಯಿತು.

ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರಗೊಳ್ಳಲಿದ್ದು, ಇದಕ್ಕಾಗಿ ಈಗಾಗಲೇ 5 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದು, ಹೆಚ್ಚುವರಿ 10 ಕೋಟಿ ರೂಪಾಯಿ ಬಿಡುಗಡೆಗೆ ಮನವಿ ಮಾಡಲಾಯಿತು.
ಸಂಸದೆ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ರಘುಪತಿ ಭಟ್, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *