Header Ads
Breaking News

ಉಜಿರೆಯಲ್ಲಿ ಪಾಕ್ ಪರ ಘೋಷಣೆ ಪ್ರಕರಣ ಮೂವರ ಬಂಧನ

ಬೆಳ್ತಂಗಡಿಯ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಿಲಿಚಂಡಿ ಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್, ದಾವೂದ್, ಹಾಗೂ ಇಸಾಕ್ ಎಂಬವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ. ಘಟನೆಯ ವೀಡಿಯೋವನ್ನು ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಈ ವಿಡಿಯೋವನ್ನು ಹೊರತುಪಡಿಸಿ ಈ ಘಟನೆಗೆ ಸಂಬಂಧಿಸಿದ ಮೊಬೈಲ್ ಮೂಲಕ ಚಿತ್ರೀಕರಿಸಲಾದ ಇತರ ಎರಡು ವಿಡಿಯೋಗಳು ಲಭ್ಯವಾಗಿದ್ದು, ಅವುಗಳನ್ನು ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಪ್ರಕರಣದ ತನಿಖೆಯ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

Related posts

Leave a Reply

Your email address will not be published. Required fields are marked *