Header Ads
Header Ads
Breaking News

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆ ಅದ್ಧೂರಿಯಾಗಿ ನಡೆಯಿತು. ಇನ್ನೂ ವಿದ್ಯಾರ್ಥಿಗಳು ವೇದಿಕೆಯಲ್ಲಿ ತಮ್ಮ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಸಂಭ್ರಮಪಟ್ಟರು

ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಪ್ರೋಫೆಸರ್ ಟಿ.ಎನ್.ಕೇಶವ್ ದೀಪ ಪ್ರಜ್ವಲನೆಯ ಮೂಲಕ ಉದ್ಘಟಿಸಿದರು.

ಉಜಿರೆಯ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಯು ಶಿಕ್ಷಣದ ಜೊತೆಗೆ ಕ್ರೀಡೆ, ಸಾಹಿತ್ಯ, ಕಲೆ, ಹೀಗೆ ವಿವಿಧ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಸರ್ವಾತೋಮುಖ ಬೆಳವಳಿಗೆಗೆ ತನ್ನದೇ ಆದ ರೀತಿಯಲ್ಲಿ ಶ್ರಮಿಸುತ್ತಿದೆ ಇದಕ್ಕೆ ಪೂರಕವಾಗಿ ಪ್ರತೀವರ್ಷದಂತೆ ಈ ವರ್ಷವೂ ಪೆಬ್ರವರಿ 4ಮತ್ತು5ರಂದು ಎರಡು ದಿನಗಳ ಕಾಲ ವಿದ್ಯಾರ್ಥಿಗಳ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆ ಅದ್ದೂರಿಯಾಗಿ ನಡೆಯಿತು.

ಈ ವೇಳೆ ಎರಡು ದಿನಗಳ ಕಾಲ ತೀರ್ಪುಗಾರರಾಗಿ ಉಪಸ್ಥಿತರಿದ್ದ ಜಾನಪದ ಕಲಾವಿದರಾದ ಉದಯ್ ಕುಮಾರ್ ಲಾಲಾ ಮಾತನಾಡಿ ಎರಡು ದಿನಗಳ ಕಾಲ ವಿದ್ಯಾರ್ಥಿಗಳು ಅಮೋಘ ರೀತಿಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ನಾನು ಒಬ್ಬ ಜಾನಪದ ಕಲಾವಿದನಾಗಿ ಅನೇಕ ರಾಷ್ಟ್ರೀಯ ಅಂತರಾಷ್ಟ್ರೀಯ ಕಾರ್ಯಕ್ರಮಗಳನ್ನು ವೀಕ್ಷಿಸಿದ್ದೇನೆ. ಆದರೆ ಇಲ್ಲಿ ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮ ಅದನ್ನು ಮೀರಿಸುವಂತಹದ್ದು ಎಂದು ಹೇಳಿದರು.

ಬಳಿಕ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧಾ ಸಮಿತಿಯ ಸಂಚಾಲಕರಾದ ಸುದೀರ್ ಕೆ.ವಿ ಮಾತನಾಡಿ ಎರಡು ದಿನಗಳ ಕಾಲ ನಡೆದ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ದೆಗೆ ಎಲ್ಲರೂ ಉತ್ತಮ ರೀತಿಯಲ್ಲಿ ಸಹಕರಿಸಿದ್ದೀರಿ ಎಂದು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭ ತೀರ್ಪುಗಾರರಾಗಿ ಕಲಾವಿದರಾದ ವಿ.ಕೆ.ವಿಟ್ಲ, ಡಾ.ಗೀತಾಂಜಲಿ ಸೇರಿದಂತೆ ವಿವಿಧ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

Leave a Reply