Header Ads
Header Ads
Breaking News

ಉಡುಪಿ:ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ, ಸಮಾಜಸೇವಕರ ಸಹಕಾರದಿಂದ ಆಸ್ಪತ್ರೆಗೆ ದಾಖಲು

ಉಡುಪಿ ನಗರದ ಸರಕಾರಿ ಬಸ್ಸು ನಿಲ್ಧಾಣದ ಸನಿಹ ಅಸ್ವಸ್ಥಗೊಂಡು ಅಸಹಾಯಕ ಸ್ಥಿತಿಯಲ್ಲಿ ಬಿದ್ದಿಕೊಂಡಿದ್ದ, ಸುಮಾರು 50 ವರ್ಷದ ಅಪರಿಚಿತ ಮಹಿಳೆಯನ್ನು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು, ನಗರ ಮಹಿಳಾ ಠಾಣೆಯ ಸಿಬ್ಬಂದಿಗಳ ಸಹಕಾರದಿಂದ ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ ಘಟನೆ ನಡೆದಿದೆ.
ಮಹಿಳೆಯು ಮಾತನಾಡಲು ಶಕ್ತರಿಲ್ಲದ ಕಾರಣದಿಂದ ಹೆಸರು ವಿಳಾಸ ತಿಳಿದು ಬಂದಿಲ್ಲವಾಗಿದೆ. ಉತ್ತರ ಕರ್ನಾಟಕ ಮೂಲದ ಮಹಿಳೆ ಇರಬಹುದೆಂದು ಶಂಕಿಸಲಾಗಿದೆ. ಮಹಿಳೆಯ ವಾರಸುದಾರರು ತುರ್ತಾಗಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಸಮಾಜಸೇವಕರ ಪ್ರಕಟಣೆ ತಿಳಿಸಿದೆ.

Related posts

Leave a Reply

Your email address will not be published. Required fields are marked *