Header Ads
Breaking News

ಉಡುಪಿಗೆ ಮೊದಲ ಬಾರಿಗೆ ಆಗಮಿಸಿದ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ಸ್ವಾಗತ ನೀಡಲಾಯಿತು.ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ,ಪೊಲೀಸರ ವೇತನ ಪರಿಷ್ಕರಣೆ ವಿಚಾರವಾಗಿ ಕೆಲವಿಷಯಗಳನ್ನು ಹಂಚಿಕೊಂಡರು. ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ. ಔರಾದ್ಕರ್ ವರದಿಗೆ ಎರಡು ಹಂತದಲ್ಲಿ ಸಚಿವ ಸಂಪುಟ ಒಪ್ಪಿಗೆಯನ್ನೂ ಕೊಟ್ಟಿದೆ.ಆದ್ರೆ ಜೈಲು ಸಿಬ್ಬಂದಿ ಮತ್ತು ಫೈಯರ್ ಫೋರ್ಸ್ ಬಿಟ್ಟು ಹೋಗಿತ್ತು. ನಮ್ಮ ಕ್ಯಾಬಿನೆಟ್ ನಲ್ಲಿ ಅವಕ್ಕೂ ಒಪ್ಪಿಗೆ ಕೊಟ್ಟಿದ್ದೇವೆ.ಆರ್ಥಿಕ ಇಲಾಖೆಯಿಂದ ಕೆಲವು ಸ್ಪಷ್ಟನೆ ಕೇಳಿದ್ದೇವೆ. ಇನ್ನೊಂದು ವಾರದೊಳಗೆ ಸ್ಪಷ್ಟವಾದ ಸುತ್ತೋಲೆ ಹೊರಡಿಸ್ತೇವೆ ಎಂದು ಹೇಳಿದರು.ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಎಲ್ಲಾ ಮಾಹಿತಿಗಳು ಸಿಬಿಐ ಬಳಿ ಇರುತ್ತವೆ. ಅಧಿಕೃತವಾಗಿ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಗೃಹ ಸಚಿವನಾಗಿ ಊಹಾಪೋಹಗಳಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ ಎಂದರು.

Related posts

Leave a Reply

Your email address will not be published. Required fields are marked *