Header Ads
Header Ads
Breaking News

ಉಡುಪಿಜಿಲ್ಲಾ ಮತದಾರರ ಸಹಾಯವಾಣಿ ಆರಂಭ :ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ರಿಂದ ಉದ್ಘಾಟನೆ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ತೆರೆಯಲಾದ ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರವನ್ನು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಉದ್ಘಾಟಿಸಿದರು.ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವ ಜನಿಕರು ಪಡೆಯುವ ಸಲುವಾಗಿ ಜಿಲ್ಲಾ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಹಿಂದೆ ಇದು ರಾಜ್ಯ ಮಟ್ಟ ದಲ್ಲಿತ್ತು. ಈಗ ಜಿಲ್ಲಾ ಕೇಂದ್ರದಲ್ಲಿಯೂ ತೆರೆಯುವಂತೆ ಕ್ರಮ ಜರಗಿಸಲಾಗಿದೆ. ಸಾರ್ವಜನಿಕರು ಮಾಹಿತಿಗಳನ್ನು ಉಚಿತ ಕರೆಗಳ ಮೂಲಕ ಪಡೆಯಲು ಟೋಲ್ ಫ್ರೀ ಸಂಖ್ಯೆ 1950ನ್ನು ಅಳವಡಿಸಲಾಗಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.

Related posts

Leave a Reply