Header Ads
Header Ads
Breaking News

ಉಡುಪಿಯಲ್ಲಿ ಉದ್ಯಮಿಯ ಕೊಲೆ

ಮಣಿಪಾಲ ಸಮೀಪದ ಇಸ್ಪೀಟ್ ಕ್ಲಬ್‌ವೊಂದರಲ್ಲಿ ತಂಡವೊಂದು ಮಾಲಕರನ್ನು ಇರಿದು ಕೊಂದಿರುವ ಘಟನೆ ನಡೆದಿದೆ.


ಮೃತರನ್ನು ಉಡುಪಿ ಪುತ್ತೂರು ಗ್ರಾಮದ ಗುರುಪ್ರಸಾದ್ ಭಟ್ ಎಂದು ಗುರುತಿಸಲಾಗಿದೆ. ಗರುಪ್ರಸಾದ ಅವರು ಕ್ಲಬ್‌ನಲ್ಲಿದ್ದ ವೇಳೆ ಓಮ್ನಿಯಲ್ಲಿ ಆಗಮಿಸಿದ ದುಷ್ಕರ್ಮಿಗಳು ಕ್ಲಬ್‌ಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ನಂತರ ಅದೇ ಕಾರಿನಲ್ಲಿ ತಂಡ ಪರಾರಿಯಾಗಿದೆ.
ಗಂಭೀರ ಗಾಯಗೊಂಡಿದ್ದ ಗುರುಪ್ರಸಾದ್‌ರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರಿ ಮೃತಪಟ್ಟಿದ್ದಾರೆ. ಗುರುಪ್ರಸಾದ ಹಣದ ವ್ಯವಹಾರವನ್ನೂ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸದ ಅಧೀಕ್ಷಕ ಕುಮಾರಚಂದ್ರ ಮಣಿಪಾಲ್ ಇನ್‌ಸ್ಪೆಕ್ಟರ್ ಸುದರ್ಶನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Reply