Header Ads
Breaking News

ಉಡುಪಿಯಲ್ಲಿ ಕೊರೊನಾ ಸೋಂಕು ಶಂಕಿತರು ಆಸ್ಪತ್ರೆಗೆ ದಾಖಲು; ಉಡುಪಿ ಕೆಎಂಸಿ ಆಸ್ಪತ್ರೆಯ ವಿಶೇಷ ವಾರ್ಡ್‍ನಲ್ಲಿ ಚಿಕಿತ್ಸೆ

ಕೊರೋನ ವೈರಸ್ ಸೋಂಕು ಶಂಕಿತ ಇಬ್ಬರು ವಿದೇಶಿ ವಿದ್ಯಾರ್ಥಿಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯ ವಿಶೇಷ ವಾರ್ಡ್‍ಗೆ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಅಮೆರಿಕ ಮತ್ತು ಕುವೈತ್‍ನಿಂದ ಬಂದವರಾಗಿದ್ದು, ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳೆನ್ನಲಾಗಿದೆ. ಈ ಇಬ್ಬರು ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದು, ಕೊರೋನ ವೈರಸ್ ಸೋಂಕಿನ ಶಂಕಿತ ಲಕ್ಷಣಗಳು ಅವರಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಐಸೋಲೇಟೆಡ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಡುಪಿ ಡಿಎಚ್‍ಒ ಡಾ.ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ. ಇಬ್ಬರು ವಿದ್ಯಾರ್ಥಿಗಳ ಗಂಟಲ ದ್ರವ್ಯ ಹಾಗೂ ರಕ್ತವನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಅದರ ವರದಿ ಬರಲಿದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳ ಕುರಿತ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಡಿಎಚ್‍ಒ ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *