Header Ads
Header Ads
Breaking News

ಉಡುಪಿಯಲ್ಲಿ ಜಿಲ್ಲಾ ಮಟ್ಟದ ಕಲೋತ್ಸವ-2019 : ಹಲವು ಸಂಘಟನೆಗಳ ವತಿಯಿಂದ ಆಯೋಜನೆ

ಪ್ರತಿಭೆಗಳು ಸ್ಥಳೀಯ ಪರಿಸರಕ್ಕೆ ಸೀಮಿವಲ್ಲ. ಕಲಾ ಪ್ರದರ್ಶನಗಳು ಸಂಸ್ಕೃತಿ, ಸಂಸ್ಕಾರಗಳನ್ನು ಪ್ರತಿಬಿಂಬಿಸುವಂತಾಗಬೇಕು. ಕಲೆಯು ಹೊರಜಗತ್ತಿಗೆ ಮಾತ್ರ ಸೀಮಿತಗೊಳಿಸದೇ ತಾನು ಹಾಗೂ ಇತರರನ್ನು ಅಂತರ್ಗತಗೊಳಿಸುವುದು ಮುಖ್ಯವಾಗಿದೆ ಇದು ಕಲಾವಿದ ಚಾತುರ್ಯವಾಗಿದೆ ಎಂದು ಶಾಸಕ ಹಾಗೂ ವಿಧಾನಸಭಾ ಆಡಳಿತ ಪಕ್ಷದ ಮುಖ್ಯ ಸಚೇತಕ ವಿ.ಸುನೀಲ್‌ಕುಮಾರ್ ಹೇಳಿದರು. ಕರ್ನಾಟಕ ಸರ್ಕಾರ, ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ವಲಯ, ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಸಂಯುಕ್ತ ಪ್ರೌಢಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-2019 ವನ್ನು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಈ ಸಂದರ್ಭ ಉಡುಪಿ ಜಿಲ್ಲಾ ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಬೈಲೂರು ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಇರ್ವತ್ತೂರು ಉದಯ ಎಸ್.ಕೋಟ್ಯಾನ್, ರೇಷ್ಮಾ ಶೆಟ್ಟಿ, ಜ್ಯೋತಿ ಪೂಜಾರಿ ಪುರಸಭಾ ಕೌನ್ಸಿಲರ್ ಪ್ರದೀಪ್ ರಾಣೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಯೋಜನೆಯ ಯೋಜನಾಧಿಕಾರಿ ಭಾಸ್ಕರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *