Header Ads
Header Ads
Breaking News

ಉಡುಪಿಯಲ್ಲಿ ದೇಹದ ಮೇಲೆ ಮುದ್ರೆ ಹಾಕಿಸಿಕೊಳ್ಳುವ ವೈಷ್ಣವ ಸಂಪ್ರದಾಯದ ವಿಶಿಷ್ಟ ಆಚರಣೆ

ಇಂದು ಸರ್ವೇಕಾದಶಿ. ಮಾಧ್ವ ಸಂಪ್ರದಾಯದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಈ ದಿನ ಮಠಾಧೀಶರ ಮೂಲಕ ಮುದ್ರಾಧಾರಣೆ ಮಾಡಿಕೊಳ್ಳುವ ಸಂಪ್ರದಾಯವಿದೆ. ಮಾಧ್ವ ಮತದ ಮೂಲಕೇಂದ್ರವಾಗಿರುವ ಉಡುಪಿಯ ಕೃಷ್ಣಮಠದಲ್ಲಿ ಸಾವಿರಾರು ಭಕ್ತರು ಮುದ್ರಾಧಾರಣೆ ಮಾಡಿಸಿಕೊಂಡರು. ತಪ್ತ ಮುದಾಧಾರಣೆಯ ಮಹತ್ವವೇನು ತಿಳಿದುಕೊಳ್ಳೋಣ ಬನ್ನೀ…

ತಪ್ತ ಮುದ್ರಾಧಾರಣೆ ವೈಷ್ಣವ ಸಂಪ್ರದಾಯದ ಒಂದು ವಿಶಿಷ್ಟ ಆಚರಣೆ. ಪ್ರಥಮ ಏಕಾದಶಿಯ ದಿನ ವಾರ್ಷಿಕ ಸಂಸ್ಕಾರವಾಗಿ ದೇಹದ ಮೇಲೆ ಮುದ್ರೆ ಹಾಕಿಸಿಕೊಳ್ಳಲಾಗುತ್ತೆ. ಆಚಾರ್ಯ ಮಧ್ವರ ಕಾಲದಿಂದ ಅಂದರೆ ಎಂಟ್ನೂರು ವರ್ಷಗಳಿಂದ ಈ ಆಚರಣೆ ಚಾಲ್ತಿಯಲ್ಲಿದೆ. ಉಡುಪಿ ಶ್ರೀ ಕೃಷ್ಣಮಠದಲ್ಲಿ ಇಂದು ಸಾವಿರಾರು ಮಂದಿ ಪರ್ಯಾಯ ಮಠಾಧೀಶರಾದ ಪಲಿಮಾರು ಸ್ವಾಮೀಜಿಯಿಂದ ಮುದ್ರಾಧಾರಣೆ ಮಾಡಿಸಿಕೊಂಡರು. ಕೇವಲ ಯತಿಗಳಿಗೆ ಮಾತ್ರ ಮುದ್ರಾಧಾರಣೆ ಮಾಡುವ ಅಧಿಕಾರವಿದೆ. ಮಾದ್ವ ಸಂಪ್ರದಾಯದ ಇತರ ಮಠಾಧೀಶರು ದೇಶದ ನಾನಾ ಭಾಗಗಳಲ್ಲಿ ಮುದ್ರಾಧಾರಣೆ ಮಾಡಿದರು. ನಾವು ದೇವರ ಪಕ್ಷದವರು ಎಂಬುದರ ಸಂಕೇತವಾಗಿ ವೈಷ್ಣವ ಚಿಹ್ನೆಗಳನ್ನು ಮೈಮೇಲೆ ಧರಿಸುವದು ಈ ಆಚರಣೆಯ ವಿಶೇಷ.ಭಗವಂತನ ಕುರಿತಾದ ಶೃದ್ಧೆಯನ್ನು ಪ್ರಕಟಿಸುವುದು ಮುದ್ರಾಧಾರಣೆಯ ಮೂಲ ಉದ್ದೇಶ. ಸುದರ್ಶನ ಹೋಮವನ್ನು ನಡೆಸಿ, ಶಂಖ ಮತ್ತು ಚಕ್ರದ ಮುದ್ರೆಯನ್ನು ಅದರ ಶಾಖದಲ್ಲಿರಿಸಲಾಗುತ್ತೆ. ಬಳಿಕ ಆ ಚಿಹ್ನೆಗಳನ್ನು ಮಠಾಧೀಶರ ಮೂಲಕ ಮೈ ಮೇಲೆ ಹಾಕಿಸಿಕೊಳ್ಳಲಾಗುತ್ತೆ. ದೇವತೆಗಳು ಕೂಡಾ ಇಂದು ಮುದ್ರಾಧಾರಣೆ ಮಾಡಿಕೊಳ್ಳುತ್ತಾರೆ, ಶ್ರೀ ಮಧ್ವಾಚಾರ್ಯರು ಸ್ವರ್ಗದಲ್ಲಿ ಅವರಿಗೆ ಮುದ್ರಾಧಾರಣೆ ಮಾಡಿಸುತ್ತಾರೆ ಎಂಬ ನಂಬಿಕೆಯಿದೆ. ಮುದ್ರಾಧಾರಣೆಯಿಂದ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ ಅನ್ನೋದು ಜನರ ವಿಶ್ವಾಸ, ಮಳೆಗಾಲದಲ್ಲಿ ಬಾಧಿಸುವ ಎಲ್ಲಾ ಬಗೆಯ ಚರ್ಮ ವ್ಯಾದಿಗಳಿಗೆ ಈ ಲೋಹಮುದ್ರೆಯಿಂದ ಪರಿಹಾರ ಕಾಣಬಹುದು ಅನ್ನೋದು ಭಕ್ತರ ಅಭಿಮತ.ಜನ ಆಧುನಿಕರಾಗುತ್ತಿದ್ದಾರೆ, ಆದರೂ ಮೂಲ ಸಂಪ್ರದಾಯವನ್ನು ಇನ್ನೂ ಬಿಟ್ಟುಕೊಟ್ಟಲ್ಲ ಅನ್ನೋದಕ್ಕೆ ಮಾದ್ವ ಸಂಪ್ರದಾಯದ ಈ ವಿಶಿಷ್ಟ ಆಚರಣೆಯೇ ಸಾಕ್ಷಿ.ಈ ಬಾರಿ ಎರಡು ಏಕಾದಶಿ ಬರುವ ಕಾರಣ ಇಂದು ಮತ್ತು ನಾಳೆ ದೇಶದ ನಾನಾ ಭಾಗಗಳಲ್ಲಿ ಮುದ್ರಾಧಾರಣೆ ನಡೆಯುತ್ತಿದೆ.

Related posts

Leave a Reply

Your email address will not be published. Required fields are marked *