Header Ads
Header Ads
Breaking News

ಉಡುಪಿಯಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ಟಿಪ್ಪು ಜಯಂತಿ

 ಉಡುಪಿಯಲ್ಲಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಟಿಪ್ಪು ಜಯಂತಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಒಂದು ಗಂಟೆಯ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ವಿರೋಧ ಇದ್ದ ಕಾರಣ, ಜಿಲ್ಲಾ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಿತ್ತು.

ಕಾರ್ಯಕ್ರಮ ನಡೆಯುವ ಸಭಾಂಗಣದಿಂದ ಐನೂರು ಮೀಟರ್ ದೂರದಲ್ಲೇ ಪೊಲೀಸರು ನಾಕಾಬಂದಿ ಏರ್ಪಡಿಸಿದ್ದರು. ಸಭೆ ಪ್ರಾರಂಭವಾಗುವ ಮುನ್ನ ಭಜರಂಗದಳದ ಬೆರಳೆಣಿಕೆಯಷ್ಟು ಮಂದಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಯತ್ನಿಸಿದ್ರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಪೊಲೀಸರು ಭಜರಂಗದಳ ಕಾರ್ಯಕರ್ತರ ಮನವೊಲಿಸಿ ಪೊಲೀಸ್ ವಾಹನದಲ್ಲಿ ಕರೆದೊಯ್ದರು. ಇನ್ನು ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಗೈರು ಹಾಜರಾಗಿದ್ದರು. ಮಾತ್ರವಲ್ಲದೇ ಜೆಡಿಎಸ್ ಮುಖಂಡರೂ ಸಹ ಕಾರ್ಯಕ್ರಮದತ್ತ ತಲೆ ಹಾಕಲಿಲ್ಲ.

Related posts

Leave a Reply