Header Ads
Breaking News

ಉಡುಪಿಯಲ್ಲಿ ಮೊದಲ ಕೊರೊನಾ ಪಾಸಿಟೀವ್ ಪತ್ತೆ

ದುಬೈನಿಂದ ವಾಪಾಸಾಗಿದ್ದ ಉಡುಪಿಯ ಯುವಕನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಮಾರ್ಚ್ 18ರಂದು ದುಬೈನಿಂದ ವಾಪಾಸಾಗಿದ್ದ 34 ವರ್ಷದ ಯುವಕ ಶಂಕಿತ ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ.

ಆದರೆ ಯುವಕನ ಗಂಟಲಿನ ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರಚೂಡ್ ಅವರು ತಿಳಿಸಿದ್ದಾರೆ. ಕೊರೊನಾ ಪೀಡಿತ ಯುವಕನಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಡುಪಿಯಲ್ಲಿ ಇದೀಗ ಮೊದಲ ಕೇಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 42ಕ್ಕೆ ಏರಿಕೆಯಾದಂತಾಗಿದೆ.

Related posts

Leave a Reply

Your email address will not be published. Required fields are marked *