Header Ads
Header Ads
Breaking News

ಉಡುಪಿಯಲ್ಲಿ ಸರಳ ರೀತಿಯಲ್ಲಿ 63ನೇ ಕನ್ನಡ ರಾಜ್ಯೋತ್ಸವ ಆಚರಣೆ

 ಉಡುಪಿಯಲ್ಲಿ ಜಿಲ್ಲಾಡಳಿತದ ವತಿಯಿಂದ 63ನೇ ಕನ್ನಡ ರಾಜ್ಯೋತ್ಸವವನ್ನು ಬೀಡಿನಗುಡ್ಡೆಯ ಮಹಾತ್ಮಾಗಾಂಧಿ ಬಯಲು ರಂಗ ಮಂದಿರದಲ್ಲಿ ಆಚರಿಸಲಾಯಿತು. ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರ ವ್ಯಾಪ್ತಿಗೆ ಬರುವುದರಿಂದ ಉಡುಪಿ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಇದೆ.

ಈ ಹಿನ್ನಲೆಯಲ್ಲಿ ಸರಳ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ದ್ವಜಾರೋಹಣ ನಡೆಸಿದರು. ಇದೇ ಸಂದರ್ಬದಲ್ಲಿ ಪೆÇಲೀಸ್ ಇಲಾಖೆ, ಎನ್.ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿಂದ ಪಥ ಸಂಚಲನ ನಡೆಯಿತು. ಜಿಲ್ಲಾಧಿಕಾರಿಗಳು ರಾಜ್ಯೋತ್ಸವದ ಸಂದೇಶ ನೀಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿದವು.

Related posts

Leave a Reply